ಜು.28: ರಾಮಕುಂಜ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಆಟಿಡೊಂಜಿ ದಿನ, ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ

0

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ಆಲಂಕಾರು ವಲಯ, ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ರಾಮಕುಂಜ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನದ ಮಹತ್ವ ಹಾಗೂ ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ, ಅಭಿನಂದನಾ ಕಾರ್ಯಕ್ರಮ ಜು.೨೮ರಂದು ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಬೆಳಿಗ್ಗೆ 9ರಿಂದ ರಾಮಕುಂಜ ಗ್ರಾಮದ ಸಮಾಜ ಬಾಂಧವರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಪೂರ್ವಾಹ್ನ 11 ಗಂಟೆ ನಡೆಯುವ ಸಭಾ ಕಾರ್ಯಕ್ರಮವನ್ನು ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಮಹಿಳಾ ಸಮಿತಿ ಅಧ್ಯಕ್ಷೆ ಗೀತಾ ಮರಂಕಾಡಿ ಉದ್ಘಾಟಿಸಲಿದ್ದಾರೆ. ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಶಿವಣ್ಣ ಗೌಡ ಕಕ್ವೆ ಅಧ್ಯಕ್ಷತೆ ವಹಿಸಲಿದ್ದಾರೆ. ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಯುವ ಸಮಿತಿ ಅಧ್ಯಕ್ಷ ಪ್ರದೀಪ್ ಬಾಕಿಲ ಉಪನ್ಯಾಸ ನೀಡಲಿದ್ದಾರೆ. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಒಕ್ಕಲಿಗ ಸ್ವ ಸಹಾಯ ಸಂಘ ಟ್ರಸ್ಟ್ ಪುತ್ತೂರು ಇದರ ಅಧ್ಯಕ್ಷ ಡಿ.ವಿ.ಮನೋಹರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿನಿಯರಾದ ಸಿಂಚನ, ಹರ್ಷಿತರವರಿಗೆ ಅಭಿನಂದನಾ ಕಾರ್ಯಕ್ರಮ, ನಿವೃತ್ತ ಎಎಸ್‌ಐ ಗಿರಿಯಪ್ಪ ಗೌಡ ಬರೆಮೇಲು, ನಾಟಿವೈದ್ಯೆ ಜಾನಕಿ ಪೂವಪ್ಪ ಗೌಡ ಅವರಿಗೆ ಗೌರವಾರ್ಪಣೆ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here