ಕೆಯ್ಯೂರು : ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರಿನಲ್ಲಿ 2024-25 ನೇ ಸಾಲಿನ ಶಾಲಾ ಸಂಸತ್ತಿನ ಪದಾಧಿಕಾರಿಗಳ ಪದಗ್ರಹಣ, ವಿವಿಧ ಸಹಪಠ್ಯ ಸಂಘಗಳ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. SDMC ಕಾರ್ಯಾಧ್ಯಕ್ಷ ಎ.ಕೆ. ಜಯರಾಮ ರೈಯವರು ಉದ್ಘಾಟನೆಯನ್ನು ನಿರ್ವಹಿಸಿ, ಶುಭ ಹಾರೈಸಿದರು. ಕಾಲೇಜು ವಿಭಾಗದ ವಿದ್ಯಾರ್ಥಿ ನಾಯಕಿ ಸಿಂಚನಾ ಎಸ್ ಮತ್ತು ಇತರ ಪದಾಧಿಕಾರಿಗಳಿಗೆ ಉಪನ್ಯಾಸಕಿ ಉಮಾಶಂಕರಿ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ನಾಯಕ ಮೊಹಮ್ಮದ್ ಸುಹೈಲ್ ಹಾಗೂ ಇತರ ಪದಾಧಿಕಾರಿಗಳಿಗೆ ಶಿಕ್ಷಕಿ ಮೋಲಿ ವಿಲ್ಮಾ ಪಿಂಟೊ ಪ್ರತಿಜ್ಞಾ ವಿಧಿ ಬೋಧಿಸಿದರು.
2023-24 ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ 33 ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಕನ್ನಡ ಎಂ.ಎ ಪರೀಕ್ಷೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಪಡೆದ ಕೆಯ್ಯೂರು ಕೆಪಿಎಸ್ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಸೌಜನ್ಯ ಬಿ.ಎಂ ಇವರನ್ನು ಗೌರವಿಸಲಾಯಿತು. ಪ್ರಾಂಶುಪಾಲ ಇಸ್ಮಾಯಿಲ್ ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆಯ್ಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜಯಂತಿ ಎಸ್ ಭಂಡಾರಿ, ಸದಸ್ಯ ರುಗಳಾದ ಜಯಂತ ಪೂಜಾರಿ ಕೆಂಗುಡೇಲು, ಮೀನಾಕ್ಷಿ ವಿ ರೈ, ಪ್ರಾಥಮಿಕ ವಿಭಾಗದ ಮುಖ್ಯಗುರು ಬಾಬು ಎಂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕ ಆನಂದ ಎನ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಶಿಕ್ಷಕಿ ನಳಿನಿ.ಡಿ ಸ್ವಾಗತಿಸಿ, ಉಪನ್ಯಾಸಕಿ ಗುಣಶೀಲಾ ಕೆ ಎನ್ ವಂದಿಸಿದರು. ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಸಂಸ್ಥೆಯ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಪ್ರೌಢಶಾಲಾ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.ಕೆಪಿಸ್ ಕೆಯ್ಯೂರು ಉಪಪ್ರಾಂಶುಪಾಲ ಕೆ.ಎಸ್ ಎನೋದ್ ಕುಮಾರ್ ಮತ್ತು ಉಪನ್ಯಾಸಕಿ ಸ್ಟೆಲ್ಲಾ ಜೆಸ್ನಾ ಲೂಯಿಸ್,ಶಿಕ್ಷಕಿ ಜೆಸ್ಸಿ ಪಿ.ವಿ ಕಾರ್ಯಕ್ರಮ ನಿರ್ವಹಿಸಿದರು.