ನೆಲ್ಯಾಡಿ: ಇಲ್ಲಿನ ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಜು.26ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು.ಸಂಸ್ಥೆಯ ಸಂಚಾಲಕ ರೆ.ಫಾ. ನೋಮಿಸ್ ಕುರಿಯಾಕೋಸ್ ಮಾತನಾಡಿ ಸೈನಿಕರು ದೇಶದ ಆಸ್ತಿ, ಕಾರ್ಗಿಲ್ ಯುದ್ಧದಲ್ಲಿ ಮಡಿದ ಎಲ್ಲಾ ಸೈನಿಕರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಸೈನಿಕರನ್ನು ಕಳೆದುಕೊಂಡ ಕುಟುಂಬಸ್ಥರು ಇಂದಿಗೂ ದುಃಖದಲ್ಲಿದ್ದಾರೆ. ಅವರ ತ್ಯಾಗ ಬಲಿದಾನಕ್ಕೆ ಬೆಲೆ ಕಟ್ಟಲು ಅಸಾಧ್ಯ ಎಂದರು.
ಕಾಲೇಜಿನ ಪ್ರಾಂಶುಪಾಲ ಎಲಿಯಾಸ್ ಎಮ್.ಕೆ ಕಾರ್ಗಿಲ್ ದಿವಸದ ಮಹತ್ವವನ್ನು ತಿಳಿಸಿದರು. ಕನ್ನಡ ಮಾಧ್ಯಮದ ಮುಖ್ಯಗುರು ತೋಮಸ್ ಎಂ.ಐ. ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಅಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವೀರ ಯೋಧರ ಸ್ಮರಣೆಗಾಗಿ ವಿವಿಧ ಕಾರ್ಯಕ್ರಮಗಳು ನಡೆಯಿತು.