ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ-ಉಪನ್ಯಾಸ-ಸನ್ಮಾನ ಕಾರ್ಯಕ್ರಮ ಜು.27 ರಂದು ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಅಪರಾಹ್ನ 2 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಲಿದ್ದಾರೆ. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ ಅಧ್ಯಕ್ಷತೆ ವಹಿಸಲಿದ್ದಾರೆ. ಸುರತ್ಕಲ್ ಗೋವಿಂದದಾಸ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಆಶಾಲತಾಪಿ. ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದ.ಕ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು, ನೆಹರೂನಗರ ವಿವೇಕಾನಂದ ಮಹಾವಿದ್ಯಾಲಯದ ಸಂಚಾಲಕ ಮುರಳೀಕೃಷ್ಣ ಕೆ.ಎನ್, ಪುತ್ತೂರು ಕಹಳೆ ನ್ಯೂಸ್ ಚಾನೆಲ್ ಮುಖ್ಯಸ್ಥ ಶ್ಯಾಮ ಸುದರ್ಶನ್ ಭಟ್ ಹೊಸಮೂಲೆ, ಗೌರವ ಉಪಸ್ಥಿತಿಯಾಗಿ ತಾಲೂಕು ಜರ್ನಲಿಸ್ಟ್ ಯೂನಿಯನ್ ಕಾನೂನು ಸಲಹೆಗಾರ ಮಹೇಶ್ ಕಜೆ, ಗೌರವ ಸಲಹೆಗಾರ ರಾಕೇಶ್ ಕುಮಾರ್ ಕಮ್ಮಾಜೆ, ಸ್ಥಾಪಕಾಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ ಭಾಗವಹಿಸಲಿದ್ದಾರೆ ಎಂದು ತಾಲೂಕು ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊಟ್ಟೆತ್ತಡ್ಕ, ಕಾರ್ಯದರ್ಶಿ ಕವಿತಾ ಮಾಣಿ, ಜೊತೆ ಕಾರ್ಯದರ್ಶಿ ಚಿನ್ಮಯ್ ಕೃಷ್ಣ, ಕೋಶಾಧಿಕಾರಿ ಪ್ರಜ್ವಲ್ ಕೋಟ್ಯಾನ್, ಉಪಾಧ್ಯಕ್ಷರಾದ ಹೇಮಾ ಜಯರಾಂ, ಚೈತ್ರ ಭೂಷಣ್ ಮತ್ತಯ ಸುಮಿತ್ರಾ ಪಿ. ತಿಳಿಸಿದ್ದಾರೆ.
ಅರ್ತಿಕಜೆಗೆ ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಇದರ ಗೌರವ ಸಲಹೆಗಾರಾದ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪ್ರೊ.ವಿ.ಬಿ.ಅರ್ತಿಕಜೆರವರನ್ನು ಸುದ್ದಿ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದರವರು ಸನ್ಮಾನಿಸಿ ಗೌರವಿಸಲಿದ್ದಾರೆ.