ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.22ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಪುರುಷೋತ್ತಮ್‌ರವರು ಅತಿಥಿಯಾಗಿ ಆಗಮಿಸಿ, ಗಡಿರಕ್ಷಣೆ ಹಾಗೂ ಕಾರ್ಗಿಲ್ ಯುದ್ಧದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯಗುರು ಸತೀಶ್ ಭಟ್ ಅವರು ವಹಿಸಿ, ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವಿದ್ಯಾರ್ಥಿಗಳಾದ ಝಾಹಿದ, ವಿಖ್ಯಾತ್, ಯಶಸ್‌ರವರು ಕಾರ್ಗಿಲ್ ವಿಜಯ ದಿವಸದ ಕುರಿತಾಗಿ ಭಾಷಣ ಮಾಡಿದರು. ವಿದ್ಯಾರ್ಥಿಗಳಾದ ನವಮಿ, ಅಧಿತಿ, ಶಾರ್ವರಿ ದೇಶಭಕ್ತಿ ಗೀತೆ ಹಾಡಿದರು. ವಿದ್ಯಾರ್ಥಿಗಳಾದ ಪೂಜಾಶ್ರೀ, ಜೀವಿತಾ, ಶ್ರದ್ಧಾ ಪ್ರಾರ್ಥಿಸಿದರು. ವಿದ್ಯಾರ್ಥಿಗಳಾದ ಕಲ್ಪಿತ ಸ್ವಾಗತಿಸಿ, ಕೀರ್ತನಾ ವಂದಿಸಿದರು. ವಿದ್ಯಾರ್ಥಿನಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here