ಬೆಳ್ಳಾರೆ : ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರ್ ಅವರ ಬಲಿದಾನ ದಿನದ ಅಂಗವಾಗಿ ಜು.26ರಂದು ಅವರ ಮನೆಯಲ್ಲಿ ಪ್ರವೀಣ್ ನೆಟ್ಟಾರ್ ಅವರ ಪ್ರತಿಮೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಹಿತ ಪಕ್ಷದ ಪದಾಧಿಕಾರಿಗಳು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರ್ ಅವರ ತಂದೆ ಶೇಖರ್ ಪೂಜಾರಿ, ತಾಯಿ ರತ್ನಾವತಿ, ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನಾ ನೆಟ್ಟಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ, ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.