ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯಲ್ಲಿ ಶಾಲಾ ಪಾಲಕರ ದಿನಾಚರಣೆ

0

ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯಲ್ಲಿ ಶಾಲಾ ಪಾಲಕರ ದಿನಾಚರಣೆಯನ್ನು ಜು.27ರಂದು ನಡೆಯಿತು.ಪಾಲಕರ ದಿನಾಚರಣೆಯ ಅಂಗವಾಗಿ ಮಾಯಿದೆ ದೇವುಸ್ ಚರ್ಚ್‌ನಲ್ಲಿ ದಿವ್ಯ ಬಲಿಪೂಜೆ ಅರ್ಪಿಸಲಾಯಿತು. ನಂತರ ಶಾಲಾ ಸಭಾಂಗಣದಲ್ಲಿ ಸಭಾಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂದನೀಯ ಫಾ. ಲಾರೆನ್ಸ್ ಮಸ್ಕರೇನ್ಹಸ್ ಮಾತನಾಡಿ, ಪ್ರತಿಯೊಬ್ಬರಿಗೂ ಜೀವನದಲ್ಲಿ ಜವಾಬ್ದಾರಿಗಳಿವೆ. ಅದನ್ನು ಸರಿಯಾಗಿ ನಿರ್ವಹಿಸಿದರೆ ನಮ್ಮ ಜೀವನವು ಪೂರ್ಣವಾಗುತ್ತದೆ. ಪರರಲ್ಲಿ ದೇವರನ್ನು ಕಾಣಬೇಕು. ಪರಸೇವೆ ಹಾಗೂ ಪ್ರೀತಿಸುವ ಮನೋಭಾವವನ್ನು ಬೆಳೆಸಬೇಕು ಎಂದ ಅವರು ಶಾಲಾ ಪಾಲಕರಾದ ಸಂತ ವಿಕ್ಟರ್ ಹಾಗೂ ಶಾಲಾ ಸಂಸ್ಥಾಪಕರಾದ ಮೊ| ಆಂಟನಿ ಪತ್ರಾವೊರವರನ್ನು ಸ್ಮರಿಸಿದರು.


ಮುಖ್ಯ ಅತಿಥಿಗಳಾಗಿದ್ದ ಸಂತ ಫಿಲೋಮಿನಾ ವಸತಿ ನಿಲಯದ ವಾರ್ಡನ್ ಹಾಗೂ ಪೋಪ್ ಅವರ ವಿಶ್ವಾದ್ಯಂತ ಪ್ರಾರ್ಥನಾ ಜಾಲದ, ಮಂಗಳೂರು ಧರ್ಮಪ್ರಾಂತ್ಯದ ನಿರ್ದೇಶಕರಾದ ಫಾ| ರೂಪೇಶ್ ರವೀನ್ ತಾವ್ರೋ ಮಾತನಾಡಿ, ಶಿಕ್ಷಣವನ್ನು ಉತ್ಸಾಹ, ಸಮರ್ಪಣೆಯಿಂದ ಮಾಡಬೇಕು. ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ದಯೆ, ಕರುಣೆಯನ್ನು ತೋರಿಸುವ ಸಹೃದಯತೆಯು ನಮ್ಮಲಿರಲಿ ಎಂದರು.


ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಇವಾನ್ ಮಸ್ಕರೇನ್ಹಸ್, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಎ.ಎಂ.ಅಶ್ರಫ್ ಮಾತನಾಡಿ, ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ರೋಸಲಿನ್ ಲೋಬೋ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ ಕೋಸ್ತ, ಶಾಲಾ ನಾಯಕಿ ಸಮೀಕ್ಷ ಕೆ ಹಾಗೂ ಗ್ರಾಹಕ, ಅಂಚೆ ಚೀಟಿ ಸಂಗ್ರಹ ಸಂಘದ ಅಧ್ಯಕ್ಷೆ ನಿಫ್ನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಆಡಳಿತ ಮಂಡಳಿಯ ಸದಸ್ಯರು, ರಕ್ಷಕ – ಶಿಕ್ಷಕ ಸಂಘ, ಹೆಣ್ಮಕ್ಕಳ ಸುರಕ್ಷಾ ಸಮಿತಿ ಹಾಗೂ ತಾಯಂದಿರ ಸಮಿತಿಯ ಸದಸ್ಯರು, ನಿವೃತ್ತ ಶಿಕ್ಷಕರು, ಪೋಷಕರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಶಾಲಾ ಪಾಲಕರಾದ ಸಂತ ವಿಕ್ಟರ್ ಹಾಗೂ ಸಂಸ್ಥಾಪಕರಾದ ಮೊ.ಆಂಟನಿ ಪತ್ರಾವೋರವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ನಂತರ ಶಾಲಾ ಪ್ರಾರ್ಥನೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು.


2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆಯುವಲ್ಲಿ ಶ್ರಮಿಸಿದ ಶಾಲಾ ಸಂಚಾಲಕರು ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿಯವರಿಗೆ ಅಭಿನಂದನಾ ಫಲಕ ನೀಡಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಶಿಕ್ಷಕಿ ಸ್ಮಿತಾ ವಂದಿಸಿದರು. 10ನೇ ತರಗತಿಯ ವಿದ್ಯಾರ್ಥಿನಿಯರಾದ ಅನ್ಸಿಯಾ ಪಾಸ್ ಮತ್ತು ಶಭಾ ಶಾನ್ವಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here