ನೆಲ್ಯಾಡಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಓ.ಟಿ.ಪಿ ಪಡೆದು ಕೊಕ್ಕಡ ಮಹಿಳೆಯೋರ್ವರಿಗೆ 1.50ರೂ.ಲಕ್ಷ ವಂಚಿಸಿದ ಪ್ರಕರಣವೊಂದು ಜು.26ರಂದು ನಡೆದಿದೆ.
ಕೊಕ್ಕಡ ಗ್ರಾಮದ ಗಾಣಗಿರಿ ನಿವಾಸಿ ಸುಶೀಲ ವಂಚನೆಗೊಳಗಾದ ಮಹಿಳೆಯಾಗಿದ್ದಾರೆ. ಇವರು ಕೆನರಾ ಬ್ಯಾಂಕ್‌ನ ಕೊಕ್ಕಡದಲ್ಲಿ ಖಾತೆ ಹೊಂದಿದ್ದು ಮೂರ‍್ನಾಲ್ಕು ದಿನದ ಹಿಂದೆ ಎಟಿಎಂ ಕಾರ್ಡ್ ಪಡೆದುಕೊಂಡಿದ್ದರು. ಜು.26ರಂದು ಬೆಳಿಗ್ಗೆ ಅಪರಿಚಿತ ವ್ಯಕ್ತಿಯೋರ್ವರು ಸುಶೀಲ ಅವರಿಗೆ ಫೋನ್ ಮಾಡಿ ನಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ನಿಮಗೆ ಒಟಿಪಿ ಬಂದಿದೆ ನಂಬರ್ ಹೇಳಿ ಎಂದರು. ಅದರಂತೆ ಓಟಿಪಿ ನಂಬರ್ ಕೊಟ್ಟ ಸ್ವಲ್ಪ ಸಮಯದ ನಂತರ ಸುಶೀಲ ಅವರ ಖಾತೆಯಿಂದ ರೂ.1.50 ಲಕ್ಷ ಡ್ರಾ ಆಗಿರುವುದು ಕಂಡು ಬಂದಿದೆ. ಕೊಕ್ಕಡ ಕೆನರಾ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಹಲವು ಗ್ರಾಹಕರು ಪದೇ ಪದೇ ಈ ರೀತಿಯ ಮೋಸದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಅಧಿಕಾರಿ ವರ್ಗದವರು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.