ರಾಮಕುಂಜ: ವಿದ್ಯಾರ್ಥಿಗಳು ಪ್ರಜಾಪ್ರಭತ್ವದ ಮೌಲ್ಯಗಳನ್ನು ಅರ್ಥೈಸಿಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಾಷ್ಟ್ರದ ಹಿತಕ್ಕಾಗಿ ತಮ್ಮ ಜೀವನದ ಸಾಧನೆಗಳನ್ನು ಮುಡಿಪಾಗಿ ಇರಿಸಬೇಕು ಎಂದು ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸತೀಶ್ ಭಟ್ ಹೇಳಿದರು.
ಅವರು ಶ್ರೀ ರಾಮಕುಂಜೇಶ್ವರ ವಿದ್ಯಾಲಯ(ಸಿಬಿಎಸ್‌ಇ)ದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅತಿಥಿಯಾಗಿ ಮಾತಾಡುತ್ತಿದ್ದರು. ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅವರು ವಹಿಸಿದ್ದರು. ನಿವೃತ್ತ ಉಪನ್ಯಾಸಕ ಹರಿನಾರಾಯಣ ಆಚಾರ್ಯ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸದಸ್ಯ ಶಿವಪ್ರಸಾದ್ ಇಜ್ಜಾವು, ಸಂಸ್ಥೆಯ ಪ್ರಾಂಶುಪಾಲ ಪ್ರವೀದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಅಪೇಕ್ಷಾ ಹಾಗೂ ಅನುಶ್ರೀ ನಿರೂಪಿಸಿದರು. ಪ್ರಾಂಶುಪಾಲ ಪ್ರವಿದ್ ಸ್ವಾಗತಿಸಿದರು. ಗೀತಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಕಿಶನ್ ರಾಜ್ ಪ್ರತಿಜ್ಞಾವಿಧಿ ಬೋಧಿಸಿದರು.
ವಿದ್ಯಾರ್ಥಿ ಸಂಘ:
ಶ್ರೀ ರಾಮಕುಂಜೇಶ್ವರ ವಿದ್ಯಾಲಯದ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯು ಜೂ.29ರಂದು ನಡೆಯಿತು. ಶಾಲಾ ಸಂಸತ್ ಚುನಾವಣೆಯಲ್ಲಿ ಇವಿಎಂ ಮೂಲಕ ಮತ ಚಲಾಯಿಸುವ ವ್ಯವಸ್ಥೆ ಮಾಡಿ ಸಂಪೂರ್ಣ ಪ್ರಜಾಪ್ರಭುತ್ವದ ಮಾದರಿಯಲ್ಲಿ ಚುನಾವಣೆ ಪ್ರಕ್ರಿಯೆಯನ್ನು ನಡೆಸಲಾಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ 8ನೇ ತರಗತಿಯ ಅಮೃತ ಜಿ, ಉಪಾಧ್ಯಕ್ಷರಾಗಿ 7ನೇ ತರಗತಿಯ ತುಷಾನ್ ಕುಮಾರ್ ಎಸ್ ಜಿ, ಕ್ರೀಡಾ ಕಾರ‍್ಯದರ್ಶಿಯಾಗಿ 8ನೇ ತರಗತಿಯ ಝನಿತ್ ರಾಜ್ ಆಯ್ಕೆಗೊಂಡರು. ಇನ್ನಿತರ ಸ್ಥಾನಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು.