ನೆಲ್ಯಾಡಿ: ಬೆಳ್ತಂಗಡಿ, ಪುತ್ತೂರು ತಾಲೂಕಿನ ಸರಕಾರಿ ಶಾಲೆಗಳಲ್ಲಿ ಕಳೆದ 30 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಹಾಗೂ ಪ್ರಸ್ತುತ ಗೋಳಿತ್ತೊಟ್ಟು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಜೋನ್ ಕೆ.ಪಿ.ಅವರು ಜು.31ರಂದು ಸೇವಾನಿವೃತ್ತಿ ಹೊಂದಲಿದ್ದಾರೆ.
ಜೋನ್ ಕೆ.ಪಿ.ಅವರು 2-08-1994ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ಹಳೆಪೇಟೆ ಸರಕಾರಿ ಹಿ.ಪ್ರಾ.ಶಾಲೆಗೆ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇರ್ಪಡೆಗೊಂಡಿದ್ದರು. ಇಲ್ಲಿ 4 ವರ್ಷ ಸೇವೆ ಸಲ್ಲಿಸಿ 1-07-1998ರಂದು ಬಜತ್ತೂರು ಸರಕಾರಿ ಹಿ.ಪ್ರಾ.ಶಾಲೆಗೆ ವರ್ಗಾವಣೆಗೊಂಡು ಆಗಮಿಸಿದ್ದರು. ಇಲ್ಲಿ ಸುಮಾರು 11 ವರ್ಷ ಸೇವೆ ಸಲ್ಲಿಸಿ 1-7-2009ರಂದು ಗೋಳಿತ್ತೊಟ್ಟು ಸರಕಾರಿ ಉನ್ನತ್ತೀಕರಿಸಿದ ಹಿ.ಪ್ರಾಶಾಲೆಗೆ ವರ್ಗಾವಣೆಗೊಂಡು ಆಗಮಿಸಿದ್ದು ಇಲ್ಲಿ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈ ಮಧ್ಯೆ ಅವರು 2 ವರ್ಷ ರಾಮಕುಂಜ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಿಯೋಜನೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ನೆಲ್ಯಾಡಿ ಮರಿಯಭವನ ನಿವಾಸಿಯಾಗಿರುವ ಜೋನ್ ಕೆ.ಪಿ.ಅವರ ಪತ್ನಿ ರೂಬಿ ಕೆ.ಜೋನ್ ಅವರು ಗೃಹಿಣಿಯಾಗಿದ್ದು ಪುತ್ರ ನಿಖಿಲ್ ದುಬೈಯಲ್ಲಿ ಉದ್ಯೋಗದಲ್ಲಿದ್ದಾರೆ. ಸೊಸೆ ಅಂಬಲಿನಿಖಿಲ್ ಅವರು ಕೇರಳ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಟೆಕ್ನಿಶಿಯನ್ ಆಗಿದ್ದಾರೆ.