ಪುತ್ತೂರು/ಮಂಗಳೂರು: ಜಿಲ್ಲೆಗೆ ಆಗಮಿಸಿದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವ ಕುಮಾರ್ ಮಳೆಯಿಂದ ಹಾನಿಯಾದ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರೊಂದಿಗೆ ಲೋಕೋಪಯೋಗಿ ಇಲಾಖೆಯ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳ ವೀಕ್ಷಿಸಿದ ಅವರು ಸಂಬಂಧ ಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಂಗಳೂರು ತಾಲೂಕಿನ ಕೆತ್ತಿಕಲ್ಲು,ಬಂಟ್ವಾಳ ತಾಲೂಕಿನ ಕಲ್ಲಡ್ಕ, ಮಾಣಿ, ಉಪ್ಪಿನಂಗಡಿ ಗುಂಡ್ಯ ಸೇರಿದಂತೆ ಶಿರಾಡಿ ಮತ್ತು ಸಕಲೇಶ್ ಪುರದ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಈ ವೇಳೆ ಪುತ್ತೂರು ಸಹಾಯಕ ಆಯುಕ್ತರು, ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಪುತ್ತೂರು ಸರ್ಕಲ್ ಇನ್ಸ್ ಪೆಕ್ಟರ್, ತಹಶೀಲ್ದಾರ್, ಪಂಚಾಯತ್ ಅಭಿವೃದ್ದಿ ಅಧಿಕಾರಿ, ರೆವೆನ್ಯೂ ಅಧಿಕಾರಿ, ಮತ್ತಿತರು ಜೊತೆಗಿದ್ದರು.