ಕಡಬ ಸರಸ್ವತೀ ಪ್ರೌಢಶಾಲೆಯಲ್ಲಿ ಸದ್ಭಾವನಾ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನೆ

0

ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹನುಮಾನ್ ನಗರ ಕೇವಳ ಇಲ್ಲಿ ನೂತನವಾಗಿ ರಚನೆಗೊಂಡ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವು ಇತ್ತಿಚೆಗೆ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ರವಿರಾಜ್ ಶೆಟ್ಟಿ ಕಡಬ ವಹಿಸಿ ಮಾತನಾಡಿ, ಶಾಲಾ ಪ್ರತಿನಿಧಿಗಳಾಗಿ ಆಯ್ಕೆಯಾಗುವುದರಿಂದ ನಮ್ಮಲ್ಲಿರುವ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬಹುದು. ಆ ಮೂಲಕ ಸಮಾಜದಲ್ಲಿ ನಮ್ಮ ನಾಯಕತ್ವವನ್ನು ಗುರುತಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿವಿಧ ಸಂಘಗಳನ್ನು ದೀಪ ಬೆಳಗಿ ಉದ್ಘಾಟಿಸಿದ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ಇದರ ಕಾರ್ಯದರ್ಶಿ, ಮಾಣಿಪ್ಪಾಡಿ ಕನ್ಸ್ ಸ್ಟ್ರಕ್ಷನ್ ಕಡಬ ಇದರ ಮಾಲಕ ಶ್ರೀಕೃಷ್ಣ ಎಂ ಆರ್, ವಿದ್ಯಾರ್ಥಿ ಸರಕಾರದಿಂದ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಆಯೋಜನೆಗೊಳ್ಳಬೇಕು. ಅದೃಷ್ಟಕ್ಕೆ ಕಾಯದೇ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು. ವೇದಿಕೆಯಲ್ಲಿ ಪ್ರೌಢ ವಿಭಾಗದ ಮೇಲ್ವಿಚಾರಕಿ, ಆಡಳಿತ ಮಂಡಳಿಯ ಸದಸ್ಯರೂ ಆದ ಪುಲಸ್ತ್ಯಾ ರೈ, ಆಡಳಿತ ಮಂಡಳಿ ಸದಸ್ಯ ಯಶೋಧರ ಕೊಣಾಜೆ ಉಪಸ್ಥಿತರಿದ್ದರು.


ವೇದಿಕೆಯಲ್ಲಿ ಉಪಸ್ಥಿತರಿದ್ದ ಪ್ರೌಢವಿಭಾಗದ ಮುಖ್ಯ ಶಿಕ್ಷಕಿ ಶೈಲಶ್ರೀ ರೈ ಎಸ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಶರಣ್ಯ ಜೆ ಕೆ, ಯಶಸ್ವಿನಿ, ರಶ್ಮಿ, ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮಿಶ ಗೌಡ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ವಂದಿಸಿದರು. ಸೌಮ್ಯ ಕೆ ಎ. ನಿರೂಪಿಸಿದರು.

LEAVE A REPLY

Please enter your comment!
Please enter your name here