ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದ ವತಿಯಿಂದ ರಕ್ತದಾನ, ಸನ್ಮಾನ ಕಾರ್ಯಕ್ರಮ

0

ಪುತ್ತೂರು: ಸ್ವಸ್ತಿಕ್ ಗೆಳೆಯರ ಬಳಗ ನೆಕ್ಕಿಲು ಇದರ ವತಿಯಿಂದ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜು.28ರಂದು ಕಲ್ಪನೆ ಮೊಗೇರ ಸಮುದಾಯ ಭವನದಲ್ಲಿ ನಡೆಯಿತು.

ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಎನ್ ಎಸ್ ಡಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಸ್ವಸ್ತಿಕ್ ಗೆಳೆಯರ ಬಳಗದ ಅಧ್ಯಕ್ಷ ನವೀನ ಎನ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ. ಸೀತಾರಾಮ ಭಟ್ ಕಲ್ಲಮ ಅವರು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನ ಗುತ್ತು ಆದಿ ಬ್ರಹ್ಮ ಮೊಗೇರ್ಕಳ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಣೇಶ್ ನೆರೋಲ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 2023-24 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಲ್ಪನೆ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದ ಹಸನ್ ಮತ್ತು ಸಫಿಯ ದಂಪತಿಗಳ ಪುತ್ರಿ ಹುಸ್ನ(578) ಹಾಗೂ ಮಹಮ್ಮದ್ ಹನೀಫ್ ಮತ್ತು ರುಕಿಯ ದಂಪತಿಗಳ ಪುತ್ರಿ ಆಯಿಷತುಲ್ ನುಸ್ರತ್(564) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು, ಕೊಂಬೆಟ್ಟು ಇಲ್ಲಿ ದ್ವಿತೀಯ ಪಿಯುಸಿ ನಲ್ಲಿ 563 ಅಂಕ ಪಡೆದ ಅಶೋಕ ಮತ್ತು ಸವಿತಾ ದಂಪತಿಗಳ ಪುತ್ರಿ ರಶ್ಮಿತ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಹರೀಶ ವೈ ಸ್ವಾಗತಿಸಿದರು. ನಿಶಾಂತ್ ವಂದಿಸಿದರು. ಸುಂದರ ಬಲ್ಯಾಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here