ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಕಾನೂನು ಮಾಹಿತಿ ಶಿಬಿರ

0

ಪುತ್ತೂರು : ಧರ್ಮಸ್ಥಳ ಸಂಕೀರ್ಣದಲ್ಲಿ ಕಾರ್ಯಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಕಾನೂನು ಮಾಹಿತಿ ಶಿಬಿರ , ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಬಗ್ಗೆ ಮಾಹಿತಿ ಕಾರ್ಯಾಗಾರ ಜು.29 ರಂದು ನಡೆಯಿತು.


ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು , ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಮತ್ತು ವಕೀಲರ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಪ್ರಗತಿ ಸ್ಟಡಿ ಸೆಂಟರ್ ಹಾಗೂ ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಇದರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಜರುಗಿತು.


ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಜಿ ಜಗನ್ನಾಥ ರೈ ವಹಿಸಿ ಮಾತನಾಡಿ , ಪ್ರತಿಯೊಬ್ಬರೂ ಕೂಡ ಕಾನೂನಿನ ಅರಿವನ್ನು ಅರಿತುಕೊಂಡು , ಇತರರಿಗೂ ಜಾಗೃತಿಯನ್ನು ಮೂಡಿಸಿದರೆ ನಾವು ಯಾವುದೇ ಕಾರ್ಯಕ್ರಮಗಳನ್ನು ಮಾಡಿದರು ಅದು ಕಾರ್ಯರೂಪಕ್ಕೆ ಬರುವುದಕ್ಕೆ ಸಾಧ್ಯವಿದೆ ಹಾಗೂ ಪ್ರತಿಯೊಬ್ಬರ ಸಹಕಾರವು ಅಗತ್ಯ. ಈ ನಿಟ್ಟಿನಲ್ಲಿ ನಮ್ಮ ವಕೀಲರ ಸಂಘ ಹಾಗೂ ಗುರುದೇವಾ ಸೇವಾ ಬಳಗ ಮತ್ತು ಪ್ರಗತಿ ಸ್ಟಡಿ ಸೆಂಟರ್ ಜತೆಯಾಗಿ ಇಂತಹ ಒಳ್ಳೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡುವುದರೊಂದಿಗೆ ಇದರಿಂದ ಪ್ರಯೋಜನ ಆಗುವ ರೀತಿಯಲ್ಲಿ ಕೆಲಸ ಕಾರ್ಯಗಳು ನಡೆಯುವಲ್ಲಿ ಪೂರ್ಣ ಬೆಂಬಲವಿದೆಯೆಂದರು.


ಸಂಪನ್ಮೂಲ ವ್ಯಕ್ತಿ ,ವಕೀಲ ನಂದಕಿಶೋರ್ ಮಾತನಾಡಿ , ಈಗಿನ ಕಾಲಘಟ್ಟದಲ್ಲಿ ಮಕ್ಕಳೂ ಹಾಗೂ ಇತರರು ಕೂಡ ಕಾನೂನಿನ ಅರಿವನ್ನು ತಿಳಿದುಕೊಳ್ಳಬೇಕಾದಂತ ಅನಿವಾರ್ಯ ಪರಿಸ್ಥಿತಿ ಇದ್ದು , ಮಾನವ ಕಳ್ಳ ಸಾಗಾಣಿಕೆ ಯಾವ ರೀತಿಯಲ್ಲಿ ನಡೆಯುತ್ತದೆ , ಅದಕ್ಕೆ ನಾವು ಯಾವ ರೀತಿಯಲ್ಲಿ ಜಾಗೃತರಾಗಬೇಕು ಎಂಬಂತಹ ಕಾನೂನಿನ ಅರಿವಿನ ಬಗ್ಗೆ ಮಾಹಿತಿ ನೀಡಿದರು.ಪ್ರಗತಿ ಸ್ಟಡಿ ಸೆಂಟರಿನ ಪ್ರಾಂಶುಪಾಲೆ ಹೇಮಲತಾ ಗೋಕುಲ್ ರವರು ಕೂಡ ಹಾರೈಸಿದರು.


ಈ ವೇಳೆ ಗುರುದೇವ ಸೇವಾ ಬಳಗದ ಅಧ್ಯಕ್ಷ ಸುಧೀರ್ ನೋಂಡ , ವಕೀಲರ ಸಂಘದ ಕೋಶಾಧಿಕಾರಿ ಮಹೇಶ್ ಕೆ ಸವಣೂರು , ಸದಸ್ಯೆ ಸ್ವಾತಿ ಜೆ ರೈ ಅವರು ಸಂದರ್ಬೋಚಿತವಾಗಿ ಮಾತನಾಡಿದರು.ವಕೀಲರ ಸಂಘದ ಉಪಾಧ್ಯಕ್ಷ ಮೋನಪ್ಪ ಎಂ ಸ್ವಾಗತಿಸಿ, ಪ್ರಗತಿ ಸ್ಟಡಿ ಸೆಂಟರ್ನ ಶಿಕ್ಷಕಿ ಪ್ರಮೀಳಾ ವಂದಿಸಿದರು.ಪ್ರಗತಿ ಸಂಸ್ಥೆಯ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕ ವೃಂದ ಅತಿಥಿಗಳನ್ನು ಗೌರವಿಸಿತು. ಶ್ರೀ ಗುರುದೇವ ಸೇವಾ ಬಳಗದ ಪ್ರಧಾನ ಕಾರ್ಯದರ್ಶಿ ಹರಿಣಾಕ್ಷಿ ಜೆ ಶೆಟ್ಟಿ ನಿರೂಪಿಸಿದರು. ವಕೀಲೆ ಅಶ್ವಿನಿ ಎಸ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನ್ಯಾಯಾಲಯದ ಸಿಬ್ಬಂದಿ ಜ್ಯೋತಿ ಸಹಕರಿಸಿದರು.

LEAVE A REPLY

Please enter your comment!
Please enter your name here