ಆ.3:ನೋವಾ ಐವಿಎಫ್ ಫರ್ಟಿಲಿಟಿ ಸಂಸ್ಥೆಯಿಂದ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರ

0

ಪುತ್ತೂರು: ನೋವಾ ಐವಿಎಫ್ ಫರ್ಟಿಲಿಟಿ ಇದರ ನೇತೃತ್ವದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಉಪ್ಪಿನಂಗಡಿ, ರೋಟರಿ ಕ್ಲಬ್ ಉಪ್ಪಿನಂಗಡಿ ಮತ್ತು ಚೇಂಬರ್ಸ್ ಆಫ್ ಕಾಮರ್ಸ್ ಉಪ್ಪಿನಂಗಡಿ ಇವುಗಳ ಸಹಯೋಗದಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರವು ಉಪ್ಪಿನಂಗಡಿ ಆರೋಗ್ಯ ಕೇಂದ್ರದಲ್ಲಿ ಆ.3 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜರುಗಲಿದೆ.


ಬಂಜೆತನ ಎನ್ನುವುದು ಚಿಕಿತ್ಸೆ ನೀಡಬಹುದಾದ ಮತ್ತೊಂದು ವಿಧದ ವೈದ್ಯಕೀಯ ಸ್ಥಿತಿಯಾಗಿದೆ. ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ, ಅನೇಕ ಬಾರಿ ಗರ್ಭಪಾತವಾಗಿದ್ದರೆ, ಅನೇಕ ಐಯುಐ ಅಥವಾ ಐವಿಎಫ್ ವೈಫಲ್ಯತೆ ಹೊಂದಿದ್ದರೆ, ವರದಿಗಳು ಸಾಮಾನ್ಯವಾಗಿದ್ದರೂ ಗರ್ಭ ಧರಿಸಲು ಅಸಾಧ್ಯವಾಗಿದ್ದರೆ,ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು, ಪಿಸಿಓಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮೀಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಯ್ಡ್‌ನಂತಹ ಸಮಸ್ಯೆಯಿದ್ದರೆ ಸಂಪರ್ಕಿಸಬಹುದು.


ನೋವಾ ಐವಿಎಫ್ ಫರ್ಟಿಲಿಟಿ ಇಲ್ಲಿನ ತಜ್ಞರಾದ ಡಾ.ಶವೀಝ್ ಫೈಝಿರವರು ಸಲಹೆಗಾರರಾಗಿ ಈ ತಪಾಸಣಾ ಶಿಬಿರವನ್ನು ನಡೆಸಿಕೊಡಲಿದ್ದಾರೆ. ಕಾರ್ಯಕ್ರಮವನ್ನು ಉಪ್ಪಿನಂಗಡಿ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಕೃಷ್ಣಾನಂದರವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಬ್ರ್ಯಾಗ್ಸ್‌ರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಪ್ರಶಾಂತ್ ಡಿ’ಕೋಸ್ಟ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಯುನಿಕ್‌ರವರು ಭಾಗವಹಿಸಲಿದ್ದಾರೆ. ಅಪಾಯಿಂಟ್ಮೆಂಟ್‌ಗಾಗಿ 8105080073, 18792144608, 9591788187 ನಂಬರಿಗೆ ಕರೆ ಮಾಡಬಹುದು ಎಂದು ನೋವಾ ಐವಿಎಫ್ ಫರ್ಟಿಲಿಟಿ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here