ನಿಡ್ಪಳ್ಳಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಬೆಟ್ಟಂಪಾಡಿ ವಲಯದ ನಿಡ್ಪಳ್ಳಿ ಒಕ್ಕೂಟದ ಧರ್ಮಶ್ರೀ ಸಂಘದ ಸದಸ್ಯ ವೆಂಕಪ್ಪ ನಾಯ್ಕರವರ ಚಿಕಿತ್ಸಾ ವೆಚ್ಚಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಂಪೂರ್ಣ ಸುರಕ್ಷಾ ಯೋಜನೆಯಡಿಯಲ್ಲಿ ಮಂಜೂರಾದ ರೂ.28.000 ದ ಚೆಕ್ಕನ್ನು ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ವಿತರಿಸಿದರು.ಬೆಟ್ಟಂಪಾಡಿ ವಲಯ ಮೇಲ್ವಿಚಾರಕ ಸೋಹನ್.ಜಿ, ಒಕ್ಕೂಟದ ಅಧ್ಯಕ್ಷ ರಾಧಾಕೃಷ್ಣ ಪಾಟಾಳಿ ಬಡಕಾಯೂರು, ಉಪಾಧ್ಯಕ್ಷ ಸತೀಶ್ ಮುಂಡಕೊಚ್ಚಿ ಸೇವಾಪ್ರತಿನಿಧಿ ಶಾಲಿನಿ.ಕೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.