ಆ.3: ಪುತ್ತೂರಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ 

0

ಪುತ್ತೂರು: ದ.ಜಿ.ಪಂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಛೇರಿ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ-2024 ಪುರಭವನದಲ್ಲಿ ಆ.3ರಂದು ಬೆಳಿಗ್ಗೆ ಗಂಟೆ 10ಕ್ಕೆ ನಡೆಯಲಿದೆ.

 ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ನಮಿತಾ ನಾಯ್ಕ್ ಭಾಗವಹಿಸಲಿದ್ದಾರೆ. ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ, ತಹಶೀಲ್ದಾರ್ ಪುರಂದರ ಮತ್ತಿತರರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here