ಪುತ್ತೂರು: ಮಳೆ ಹಾನಿ ಪ್ರದೇಶಕ್ಕೆ ಎ.ಸಿ ಭೇಟಿ – ಮಣ್ಣು ತೆರವಿನ ಬಳಿಕ ಬೈಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು – ಎ ಸಿ ಜುಬಿನ್ ಮೋಹಪಾತ್ರ

0

ಪುತ್ತೂರು: ಪುತ್ತೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ – ಬೈಪಾಸ್ ರಸ್ತೆಯಲ್ಲಿ ಗುಡ್ಡ ಕುಸಿದು ಬಿದ್ದಿದ್ದು ವಾಹನ ಸಂಚಾರಕ್ಕೆ ತಡೆಯಾಗಿದ್ದು, ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.ಈ ನಡುವೆ ಕಾರ್ಯಾಚರಣೆ ನಡೆಯುತ್ತಿದ್ದ ಸ್ಥಳಕ್ಕೆ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮೋಹಪಾತ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

4 ಜೆಸಿಬಿ ಮತ್ತು 1 ಹಿಟಾಚಿ ಮೂಲಕ ಮಣ್ಣು ತೆರವು ಕಾರ್ಯ ಮುಂದುವರಿದಿದ್ದು, ಮಣ್ಣನ್ನು ತೆರವುಗೊಳಿಸಿದ ಬಳಿಕ ರಸ್ತೆಗಂಟಿದ ಕೆಸರು ಮಣ್ಣಿಗೆ ನೀರು ಹಾಯಿಸಿ ಶುಚಿಗೊಳಿಸಿದ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ಮಾಡಿಕೊಡಲಾಗುವುದು ಎಂದು ಸಹಾಯಕ ಕಮೀಷನರ್ ಜುಬಿನ್ ಮೋಹಪಾತ್ರ ತಿಳಿಸಿದ್ದಾರೆ. ಈ ಸಂದರ್ಭ ನಗರಸಭೆ ಸದಸ್ಯ ಭಾಮಿ ಅಶೋಕ್ ಶೆಣೈ, ಪೌರಾಯುಕ್ತ ಮಧು ಎಸ್ ಮನೋಹರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here