ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10ರಂದು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದ್ದು, ಸನ್ಮಾನಿತರ ನಿವಾಸಕ್ಕೆ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಪದಾಽಕಾರಿಗಳು ಭೇಟಿ ನೀಡಿ, ಗೌರವಪೂರ್ವಕವಾಗಿ ಸಮಾರಂಭದ ಆಮಂತ್ರಣ ನೀಡಿ, ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಬಂಟ ಶೀರೋಮಣಿ ಪ್ರಶಸ್ತಿ ಪುರಸ್ಕೃತರಾದ ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಬಂಟ ಸಿರಿ ಪ್ರಶಸ್ತಿ ಪುರಸ್ಕೃತರಾದ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಕ್ರೀಡಾ ಪ್ರಶಸ್ತಿ ಪುರಸ್ಕೃತ ಸುನೀಲ್ ಕುಮಾರ್ ಶೆಟ್ಟಿ, ಅರಣ್ಯ ಮಿತ್ರ ಪುರಸ್ಕೃತರಾದ ಡಾ. ಆಶಾ ಶಂಕರ ಭಂಡಾರಿ ಡಿಂಬ್ರಿ, ಪ್ರತಿಭಾನ್ವಿತ ವಿದ್ಯಾ ಅರಿಯಡ್ಕ ಪ್ರಶಸ್ತಿ ಪುರಸ್ಕೃತರಾದ ಧನುಜ, ಬಂಟ ಸಮಾಜದ ಹಿರಿಯರಾದ ಸಹಕಾರ ರತ್ನ ದಂಬೆಕ್ಕಾನ ಸದಾಶಿವ ರೈ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಮೋಹನ್ ಆಳ್ವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಗೀತಾ ಮೋಹನ್ ರೈ ನರಿಮೊಗರು, ತಾಲೂಕು ಬಂಟರ ಸಂಘದ ನಿಕಟಪೂರ್ವಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಮಾಜಿ ಅಧ್ಯಕ್ಷರುಗಳಾದ ಅರಿಯಡ್ಕ ಲಕ್ಷ್ಮಿ ನಾರಾಯಣ ಶೆಟ್ಟಿ, ಬೂಡಿಯಾರ್ ರಾಧಾಕೃಷ್ಣ ರೈ, ನಿಕಟರ್ಪೂ ಕೋಶಾಽಕಾರಿ ಕೃಷ್ಣಪ್ರಸಾದ್ ಆಳ್ವ ಉಪ್ಪಳಿಗೆ, ಮಾತೃ ಸಂಘದ ಪುತ್ತೂರು ತಾಲೂಕು ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣಪ್ರಸಾದ್ ಭಂಡಾರಿ ಸಾಜರವರ ನಿವಾಸಕ್ಕೆ ಭೇಟಿ ನೀಡಿ ಆಹ್ವಾನಿಸಲಾಯಿತು. ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಽಕಾರಿ ಸಂತೋಷ್ ಶೆಟ್ಟಿ ಸಾಜ, ಮಾತೃ ಸಂಘದ ಪುತ್ತೂರು ತಾಲೂಕು ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಬಂಟರ ಸಂಘದ ನಿರ್ದೇಶಕರುಗಳಾದ ರವಿಪ್ರಸಾದ್ ಶೆಟ್ಟಿ ಬನ್ನೂರು, ಶಶಿಕಿರಣ್ ರೈ ನೂಜಿಬೈಲು, ನಿಕಟಪೂರ್ವ ಕೋಶಾಽಕಾರಿ ಕೃಷ್ಣ ಪ್ರಸಾದ್ ಆಳ್ವ ಉಪ್ಪಳಿಗೆ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಮಹಿಳಾ ಬಂಟರ ಸಂಘದ ಅನಿತಾ ಹೇಮನಾಥ ಶೆಟ್ಟಿ, ಅರುಣಾ ದಿನಕರ್ ರೈ, ಶುಭಾ ರೈ ಮತ್ತಿತರರು ಉಪಸ್ಥಿತರಿದ್ದರು.