ಉಪ್ಪಿನಂಗಡಿ: ಹಠಾತ್ ಅನಾರೋಗ್ಯ- ಕಾಲೇಜು ವಿದ್ಯಾರ್ಥಿ ನಿಧನ

0

ಉಪ್ಪಿನಂಗಡಿ: ಹಠಾತ್ ಅನಾರೋಗ್ಯಕ್ಕೀಡಾದ ಕಾಲೇಜು ವಿದ್ಯಾರ್ಥಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ. ಕೊಯಿಲದ ಗಂಡಿಬಾಗಿಲು ನಿವಾಸಿಯಾಗಿರುವ ಈತ ಕಾಲೇಜಿಗೆಂದು ಬೆಳಿಗ್ಗೆ ತನ್ನ ಗೆಳೆಯರೊಂದಿಗೆ ಹೊರಟು ಬಂದಿದ್ದು, ಕಾಲೇಜಿನ ದಾರಿ ಮಧ್ಯೆ ಬಿ.ಪಿ. ಲೋ ಸಮಸ್ಯೆಯಿಂದ ಈತ ತಲೆ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಇವರನ್ನು ಜೊತೆಗಿದ್ದ ಸ್ನೇಹಿತರು ಈತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಕಾಲೇಜಿಗೆ ತಂದು ಅಂತಿಮ ದರ್ಶನಕ್ಕಿಡಲಾಗಿತ್ತು.

LEAVE A REPLY

Please enter your comment!
Please enter your name here