ಆ.4: ಕ್ರಿಸ್ಟೋಫರ್ ಫಿಟ್ನೆಸ್ ಸೆಂಟರ್ ನಲ್ಲಿ ಆಟಿಡ್ ಒಂಜಿ ದಿನ, ಸಾಧಕರಿಗೆ ಸನ್ಮಾನ

0

ಪುತ್ತೂರು: ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳ ಕ್ರಿಸ್ಟೋಫರ್ ಫಿಟ್ನೆಸ್ ಸೆಂಟರ್ ನಲ್ಲಿ ಜಿಮ್ ದ ಕಲೊಟ್ಟು ಆಟಿದ ನೆನಪು ಹೆಸರಿನಲ್ಲಿ ‘ಆಟಿಡ್ ಒಂಜಿ ದಿನ ಹಾಗೂ ಸಾಧಕರಿಗೆ ಸನ್ಮಾನ’ ಕಾರ್ಯಕ್ರಮವು ಆ.4ರಂದು ಜರಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ವಲೇರಿಯನ್ ಡಾಯಸ್ ರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಸೆಂಟ್ರಲ್ (ಸಿ.ಬಿ.ಎಸ್.ಇ) ಸ್ಕೂಲ್ ನ ಮುಖ್ಯೋಪಾಧ್ಯಾಯಿನಿ ಸಿಂಧು ವಿ.ಜಿ, ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ|ಎಲ್ಯಾಸ್ ಪಿಂಟೊರವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನೆರವೇರಲಿದೆ ಜೊತೆಗೆ ಮನೋರಂಜನಾ ಆಟಗಳು, ಆಟಿದ ಬಂಜಾರ ವನಸ್ ನಡೆಯಲಿದೆ. ಕಾರ್ಯಕ್ರಮದ ನಿರ್ವಹಣೆ ಹಾಗೂ ನಿರೂಪಣೆಯನ್ನು ನವೀನ್ ಕುಲಾಲ್ ರವರು ನಿರ್ವಹಿಸಲಿದ್ದಾರೆ ಎಂದು ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳ ನಿರ್ದೇಶಕ ಮನೋಜ್ ಡಾಯಸ್, ಜಿಮ್ ಮುಖ್ಯ ತರಬೇತುದಾರ ನವನೀತ್ ಬಜಾಜ್, ಟ್ರೈನರ್ ಗಳಾದ ಸಂದೀಪ್, ಧನುಷ್, ಶರಣ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here