ನೆಲ್ಯಾಡಿ: ಜಿ.ಪಂ.ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು ಅವರ ತಾಯಿ, ಕೌಕ್ರಾಡಿ ಗ್ರಾಮದ ಬಾಣಜಾಲು ದಿ.ಕೃಷ್ಣಪ್ಪ ಪೂಜಾರಿ ಅವರ ಪತ್ನಿ ಅಪ್ಪಿ(87ವ.)ಅವರು ಆ.3ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು.
ಅಪ್ಪಿ ಅವರು ಮೂರು ದಿನದ ಹಿಂದೆ ಅನಾರೋಗ್ಯದಿಂದ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು ತುಸು ಚೇತರಿಕೆಯ ಹಿನ್ನೆಲೆಯಲ್ಲಿ ಅವರ ಕೋರಿಕೆಯಂತೆ ಆ.2ರಂದು ಮನೆಗೆ ಬಂದು ವಿಶ್ರಾಂತಿ ಪಡೆಯುತ್ತಿದ್ದರು. ಆ.3ರಂದು ಸಂಜೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೊನೆಯುಸಿರೆಳೆದಿದ್ದಾರೆ. ಮೃತರು ಪುತ್ರರಾದ ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಜನಾರ್ದನ ಬಾಣಜಾಲು, ಉದ್ಯಮಿ ಸುಂದರ ಬಾಣಜಾಲು, ನಿಡ್ಲೆ ಗ್ರಾ.ಪಂ.ಸದಸ್ಯ ಮೋಹನ, ಕೃಷಿಕ ದೇವದಾಸ್, ಜಿ.ಪಂ.ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಲೋಕೇಶ್ ಬಾಣಜಾಲು, ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ನಿರ್ದೇಶಕ ಜಯರಾಮ ಬಾಣಜಾಲು, ಪುತ್ರಿಯರಾದ ಕಡೆಶ್ವಾಲ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಪುಷ್ಪಲತಾ, ಮೋಹಿನಿ, ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ. ಇವರ ಇನ್ನೋರ್ವ ಪುತ್ರ ಉಪ್ಪಿನಂಗಡಿ ಸುವರ್ಣ ಚಿಕನ್ ಸೆಂಟರ್‌ನ ಮಾಲಕರಾಗಿದ್ದ ಸುರೇಶ್ ಸುವರ್ಣ ಅವರು 9 ವರ್ಷದ ಹಿಂದೆ ಡೆಂಗ್ಯು ಜ್ವರದಿಂದ ಮೃತಪಟ್ಟಿದ್ದರು.
ಮೃತರ ಮನೆಗೆ ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಉಪಾಧ್ಯಕ್ಷ ಶಿವಪ್ರಸಾದ್, ಎಸ್‌ಟಿ ಮೋರ್ಚಾದ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೂವಪ್ಪ ನಾಯ್ಕ್, ಪುತ್ತೂರು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ, ಗುತ್ತಿಗಾರು ಸೈಂಟ್ ಮೇರಿಸ್ ಚರ್ಚ್‌ನ ಧರ್ಮಗುರು ರೆ.ಫಾ.ಆದರ್ಶ ಜೋಸೆಫ್, ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆ ಸಂಚಾಲಕ ರೆ.ಫಾ.ಜೈಸಸ್ ಜಿ.ಪಂ.ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ ನೆಲ್ಯಾಡಿ, ಕೃಷ್ಣ ಶೆಟ್ಟಿ ಕಡಬ, ತಾ.ಪಂ.ಮಾಜಿ ಸದಸ್ಯೆ ಉಷಾ ಅಂಚನ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಕೌಕ್ರಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಎಂ.ಕೆ.ಇಬ್ರಾಹಿಂ, ನೆಲ್ಯಾಡಿ ವರ್ತಕ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್.ದುರ್ಗಾಶ್ರೀ ಸಹಿತ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.