ಮಡ್ಯಂಗಳ: ಹೆದ್ದಾರಿ ಬದಿಯ ಅಪಾಯಕಾರಿ ಮರ ತೆರವು

0

ಕೌಡಿಚ್ಚಾರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಡ್ಯಂಗಳದಲ್ಲಿ ರಸ್ತೆಗೆ ಬಾಗಿಕೊಂಡಿದ್ದ ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದರು.
ಎಡೆಬಿಡದೆ ಸುರಿದ ಮಳೆಯಿಂದಾಗಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಿಯಡ್ಕ ಗ್ರಾಮದ ಮಡ್ಯಂಗಳದಲ್ಲಿ ಗುಡ್ಡ ಕುಸಿತಗೊಂಡು ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಇಲ್ಲಿ ಅಪಾಯಕಾರಿಯಾಗಿದ್ದ ಮರಗಳನ್ನು ಅರಣ್ಯ ಇಲಾಖೆಯವರು ಮೆಸ್ಕಾಂನ ಸಹಕಾರದೊಂದಿಗೆ ತೆರವುಗೊಳಿಸಿದ್ದಾರೆ. ಪೊಲೀಸರು ಸ್ಥಳದಲ್ಲಿದ್ದ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿದರು.

LEAVE A REPLY

Please enter your comment!
Please enter your name here