ನರೇಂದ್ರ ಪ.ಪೂ.ಕಾಲೇಜಿನಲ್ಲಿ ನೂತನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘಗಳ ಉದ್ಘಾಟನಾ ಕಾರ‍್ಯಕ್ರಮ

0

ಪುತ್ತೂರು: ನಾಯಕತ್ವದ ಬೆಳವಣಿಗೆಗೆ ಹಾಗೂ ಆರೋಗ್ಯಯುತ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ವಿದ್ಯಾರ್ಥಿ ಸಂಘಗಳು ಮಾರ್ಗಸೂಚಿಗಳಾಗಲಿವೆ.ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸಬಲ್ಲ ಶಕ್ತಿ ಇರುವ ವಿದ್ಯಾರ್ಥಿ ಜೀವನದಲ್ಲಿ, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಲ್ಲಿ ಉತ್ತಮ ಪ್ರಜೆಗಳಾಗಿ ಬದುಕಲು ಸಾಧ್ಯ.ಜಗತ್ತಿನ ಕತ್ತಲೆಯನ್ನು ಹೋಗಲಾಡಿಸುವ ಅಗಾಧ ಶಕ್ತಿ ವಿದ್ಯಾರ್ಥಿಗಳಲ್ಲಿದೆ.ಉತ್ತಮ ನಾಯಕತ್ವ ಗುಣಮಟ್ಟವನ್ನು ಬೆಳೆಸಿಕೊಂಡಾಗ ಪ್ರಪಂಚವನ್ನೇ ಬದಲಿಸುವಂತಹ ಪ್ರಜೆಗಳಾಗಬಹುದು.ಎಂದು ಸುಳ್ಯದ ಸರಕಾರಿ ಪ.ಪೂ. ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ ಪಿ. ಹೇಳಿದರು.


ನರೇಂದ್ರ ಪ.ಪೂ.ಕಾಲೇಜಿನಲ್ಲಿ 2024-25 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಭಾವೈಕ್ಯತೆಯ ಭಾವನೆಗಳನ್ನು ವಿದ್ಯಾರ್ಥಿಗಳಲ್ಲಿ ಉದ್ದೀಪನಗೊಳಿಸುವುದರ ಜೊತೆಗೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ದಿಟ್ಟವಾಗಿ ಎದುರಿಸಲು,ಶಾರೀರಿಕ ಮತ್ತು ಮಾನಸಿಕ, ಬೌದ್ಧಿಕ,ಭಾವನಾತ್ಮಕ ಮತ್ತು ನೈತಿಕ ಬೆಳವಣಿಗೆಯ ಜೊತೆಗೆ ಕ್ರಿಯಾಶೀಲತೆಯನ್ನು ಹೆಚ್ಚಿಸಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಈ ವಿದ್ಯಾರ್ಥಿ ಸಂಘ ಒಂದು ವೇದಿಕೆಯಾಗಿದೆ.ಹೊಸ ಚೈತನ್ಯ ತುಂಬಿ ಸಾಮಾಜಿಕ ಸೇವಾ ಮನೋಭಾವವನ್ನು ಬೆಳೆಸಲು ಹಾಗೂ ದೇಶಾಭಿಮಾನ, ದೇಶಪ್ರೇಮ, ರೂಡಿಸಿಕೊಳ್ಳಲು ಇಂತಹ ವಿದ್ಯಾರ್ಥಿ ಸಂಘವು ಸಹಕಾರಿಯಾಗಿರುತ್ತದೆ.ಎಂದು ಹೇಳಿದರು.


ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆಕಾರ‍್ಯದರ್ಶಿ ರೂಪಲೇಖ ಮಾತನಾಡಿ ಜೀವನದಲ್ಲಿ ವಿದ್ಯಾರ್ಥಿಗಳು ಕಲಿಕೆಯ ಗುಣಮಟ್ಟವನ್ನು ವೃದ್ಧಿಸಿ ಏಕತೆಯಿಂದ ಒಗ್ಗೂಡಿಕೊಂಡು ನಿರಂತರ ಪರಿಶ್ರಮದಿಂದ ಸಾಧಿಸಬೇಕಾದ ಅನಿವಾರ‍್ಯತೆಯಿದೆ.ಸಮಾಜಕ್ಕೆ ಸಹಕಾರಿಯಾಗುವಂತಹ ಶಿಕ್ಷಣವು ವಿದ್ಯಾರ್ಥಿಗಳಿಗೆ ಸಿಗಬೇಕಿದೆ.ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘವು ಹೆಜ್ಜೆ ಹಾಕಬೇಕು ಎಂದು ಹೇಳಿದರು.


ವೇದಿಕೆಯಲ್ಲಿ ಕಾರ‍್ಯಕ್ರಮದ ನರೇಂದ್ರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್, ವಿದ್ಯಾರ್ಥಿ ಸಂಘದ ನಾಯಕನಾದ ದ್ವಿತೀಯ ವಾಣಿಜ್ಯ ವಿಭಾಗದ ಶ್ರಜನ್, ಕಾರ‍್ಯದರ್ಶಿಯಾದ ದ್ವಿತೀಯ ವಿಜ್ಞಾನ ವಿಭಾಗದ ಕು. ಆಶಿಕಾ, ಜೊತೆ ಕಾರ‍್ಯದರ್ಶಿಯಾಗಿ ಪ್ರಥಮ ವಾಣಿಜ್ಯ ವಿಭಾಗದ ಹರ್ಷಿತಾ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಬೋಧಿಸಿದರು.



ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್‌ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದ್ವಿತೀಯ ವಾಣಿಜ್ಯ ವಿಭಾಗದ ಶ್ರಜನ್ ವಂದಿಸಿದರು.ದ್ವಿತೀಯ ವಿಜ್ಞಾನ ವಿಭಾಗದ ಅಗಮ್ಯ ಕಾರ‍್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here