ನಾಣಿಲ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

0

ಕಾಣಿಯೂರು : ಕಾಣಿಯೂರು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಯೋಗ ತರಬೇತಿ ಉದ್ಘಾಟನಾ ಕಾರ್ಯಕ್ರಮವು ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.


ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿ ಉದ್ಘಾಟಿಸಿ ಶುಭ ಹಾರೈಸಿದರು. ಯೋಗ ತರಬೇತಿದಾರ ಅಶೋಕ ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಚಾರ್ವಾಕ ಸಮುದಾಯ ಆರೋಗ್ಯ ಅಧಿಕಾರಿ ಪುಷ್ಪಲತಾ ಯೋಗ ತರಗತಿಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ಸದಸ್ಯೆ ತೇಜ ಕುಮಾರಿ ಉದ್ಲಡ್ಡ, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಕುಸುಮಾವತಿ ಕಳ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕ ವೃಂದ ಶಾಲಾ ಮಕ್ಕಳು ಭಾಗವಹಿಸಿದ್ದರು. ಶಾಲಾ ಮುಖ್ಯಗುರು ಪದ್ಮಯ ಗೌಡ ಸ್ವಾಗತಿಸಿ, ಸಹ ಶಿಕ್ಷಕರಾದ ಸುನಿಲ್ ವಂದಿಸಿದರು.

LEAVE A REPLY

Please enter your comment!
Please enter your name here