ನೆಲ್ಯಾಡಿ: ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ಒಕ್ಕೂಟಗಳ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಆ.1ರಂದು ನಡೆಯಿತು.
ನೆಲ್ಯಾಡಿ ವಲಯ ಒಕ್ಕೂಟದ ಅಧ್ಯಕ್ಷರಾದ ಕುಶಾಲಪ್ಪ ಗೌಡ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಬ ತಾಲೂಕಿನ ಯೋಜನಾಧಿಕಾರಿ ಮೇದಪ್ಪ ಗೌಡ ಎನ್. ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಶ್ರೀ ಕ್ಷೇತ್ರದಿಂದ ನಡೆಯುವ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ದ.ಕ.-2 ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಒಕ್ಕೂಟದ ಪದಾಧಿಕಾರಿಗಳಿಗೆ ಪ್ರಸ್ತುತ ವಿದ್ಯಮಾನಗಳ ಬಗ್ಗೆ ವಿವರಿಸಿ ತಂಡದ ಸದಸ್ಯರಿಗೆ ಶ್ರೀ ಕ್ಷೇತ್ರದಿಂದ ಮತ್ತು ಯೋಜನೆಯಿಂದ ಸಿಗುವ ಸವಲತ್ತುಗಳನ್ನು ಒದಗಿಸಿಕೊಡುವಲ್ಲಿ ಒಕ್ಕೂಟದ ಪದಾಧಿಕಾರಿಗಳು ಕೆಲಸ ನಿರ್ವಹಿಸಬೇಕು. ಇದು ಸದಸ್ಯರ ಸಮಸ್ಯೆಗೆ ಸ್ಪಂದಿಸುವ ಸದವಕಾಶ ಕಲ್ಪಿಸುತ್ತದೆ ಎಂದರು. ವೀಕ್ಷಣಾಧಿಕಾರಿ ಶೀಲಾವತಿ, ನೆಲ್ಯಾಡಿ ವಲಯದ ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು, ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಹೇಮಾವತಿ ವಂದಿಸಿದರು.

LEAVE A REPLY

Please enter your comment!
Please enter your name here