ಕರಾಟೆಯಲ್ಲಿ ಕಡಬ ಸರಸ್ವತೀ ಪ್ರೌಢಶಾಲೆ ವಿದ್ಯಾರ್ಥಿ ಹರಿಪ್ರಸಾದ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಕಡಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ಹರಿಪ್ರಸಾದ್ 10ನೇ ತರಗತಿ 35-40 ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತನಿಗೆ ಕರಾಟೆ ಶಿಕ್ಷಕ ಯಾದವ್ ಬೀರಂತಡ್ಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮೀಶ ಗೌಡ ಆರಿಗ ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here