ಪುತ್ತೂರು: ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಿಂದ ಸಾರ್ವಜನಿಕ ಗಮನಕ್ಕೆ ಪ್ರಕಟಣೆ ಹೊರಡಿಸಲಾಗಿದ್ದು ಪ್ರಕಟಣೆಯಲ್ಲಿ ಜಿಲ್ಲೆಯಲ್ಲಿ ಅಂತರರಾಜ್ಯ ಕಳ್ಳರು, ಚಡ್ಡಿ ಗ್ಯಾಂಗ್,ಮನೆ ಕಳ್ಳತನ ಮಾಡುವವರು ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಜಾಗ್ರತೆಯನ್ನು ವಹಿಸುವಂತೆ ತಿಳಿಸಿದ್ದಾರೆ.
ಸಾರ್ವಜನಿಕರು ರಾತ್ರಿ ಸಮಯ ಮನೆಯ ಕಿಟಕಿ ಬಾಗಿಲುಗಳನ್ನು ಭದ್ರವಾಗಿ ಹಾಕಿಕೊಳ್ಳುವುದು. ತಮ್ಮ ತಮ್ಮ ಬೆಲೆಬಾಳುವ ಸೊತ್ತುಗಳನ್ನು ಮನೆಯಲ್ಲಿಡದೆ ಸೇಫ್ ಲಾಕರ್ ನಲ್ಲಿ ಇಡುವುದು. ತಮ್ಮ ಮನೆಯ ಮತ್ತು ವಾಸ್ತವ್ಯದ ಪರಿಸರದಲ್ಲಿ ಇರುವ ಸಿಸಿ ಕ್ಯಾಮರಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವುದು. ಯಾವುದೇ ಅಪರಿಚಿತ ಅಥವಾ ಸಂಶಯಾಸ್ಪದ ವ್ಯಕ್ತಿಗಳು, ಮಹಿಳೆಯರು ಕಂಡು ಬಂದಲ್ಲಿ ಕೂಡಲೇ ತುರ್ತು ಕರೆ ಸೇವೆ 112, ದ.ಕ ಕಂಟ್ರೋಲ್ ರೂಮ್ 9480805300 ಪುತ್ತೂರು ಗ್ರಾಮಾಂತರ ಪೊಲೀಸ್ ನಿರೀಕ್ಷಕರು 94808 05363 ಪೊಲೀಸ್ ಉಪ ನೀರಿಕ್ಷಕರು ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ತಿಳಿಸುವಂತೆ ತಿಳಿಸಿದ್ದಾರೆ.
ವಸತಿ, ಬಡಾವಣೆ, ಪರಿಸರದಲ್ಲಿ ದಾರಿ ದೀಪ, ಸಾರ್ವಜನಿಕ ದೀಪಗಳು ಉರಿಯುತ್ತಿರುವ ಬಗ್ಗೆ ದೃಡಪಡಿಸುವುದು, ಇಲ್ಲದೆ ಇದ್ದಲ್ಲಿ ಮೆಸ್ಕಾಂ ,ಗ್ರಾಮ ಪಂಚಾಯತ್ ಗೆ ತಿಳಿಸುವುದು ( ಅಗತ್ಯ ಸಹಕಾರ ನಿರೀಕ್ಷಿಸಿದ್ದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರನ್ನು ಸಂಪರ್ಕಿಸಬಹುದಾಗಿದೆ ) ಒಂಟಿ ಮನೆಗಳು, ಲಾಕ್ಡ್ ಹೌಸ್, ಹಿರಿಯ ನಾಗರೀಕರು, ಮಹಿಳೆಯರು ಮಾತ್ರ ವಾಸ್ತವ್ಯ ಇರುವ ಮನೆಗಳು ಇದ್ದಲ್ಲಿ ಬೀಟ್ ಪೊಲೀಸ್ ರಿಗೆ ಮಾಹಿತಿಯನ್ನು ನೀಡುವುದು ಎಂದು ತಿಳಿಸಲಾಗಿದೆ.
ಅಪರಾಧಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಬೇಕಾಗಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.