ಕರಾಟೆಯಲ್ಲಿ ಸುದಾನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಆಗಸ್ಟ್ 5  ರಂದು ಪುತ್ತೂರಿನ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುದಾನ ಶಾಲೆಯ ಐದು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಅನಿಶ್.ಎಲ್.ರೈ (10) ಆಯುಷ್.ಎಲ್.ರೈ (8),ಸಾನ್ವಿತ.ಎಂ.ರೈ (8), ಆದಿತ್ಯ ಕಾಟ್ಕಾರ್ (7), ನಿನಾದ.ಪಿ (7) ಆಯ್ಕೆಯಾಗಿರುವ ವಿದ್ಯಾರ್ಥಿಗಳು. ಇವರನ್ನು ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ನಾಗರಾಜ್   ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿ, ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here