





ಕಾಣಿಯೂರು: ವೀರಮಂಗಲ ಪಿ ಎಂ ಶ್ರೀ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಸಾತ್ವಿಕ್ (10 ಆ ಮಾ ) ಕಿಶನ್ ಪಿ ಜೆ (10 ಆ ಮಾ ) ಮತ್ತು ಸಮರ್ಥ್ ಪಿ (9 ಆ ಮಾ )ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರು ತರಬೇತುಗೊಳಿಸಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯರೈ ಮಾದೋಡಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕರ ರಕ್ಷಕ ಸಂಘದ ಅಧ್ಯಕ್ಷರಾದ ದಿವಿಶ್ ಮುರುಳ್ಯ, ಮುಖ್ಯಗುರುಗಳು ಮತ್ತು ಸಂಸ್ಥೆ ಎಲ್ಲ ಶಿಕ್ಷಕ ವೃಂದದವರು ಅಭಿನಂದಿಸಿದರು.










