ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿ ನಿಕ್ಷೇಪ್ ಕೃಷ್ಣ ಆಯ್ಕೆ

0

ಪುತ್ತೂರು: ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಿಕ್ಷೇಪ್ ಕೃಷ್ಣ ಪ್ರಥಮ ಸ್ಥಾನವನ್ನು ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರು ಪುತ್ತೂರಿನ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ತಮ್ಮ ವ್ಯಾಸಂಗವನ್ನು ಮುಗಿಸಿ ,ಪ್ರಸ್ತುತ ನರೇಂದ್ರ ಪ.ಪೂ. ಕಾಲೇಜಿನಲ್ಲಿ ದ್ವಿತೀಯ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಸಂಪ್ಯದ ಕೆ. ಉದಯ್ ಕುಮಾರ್ ಮತ್ತು ಅನ್ನಪೂರ್ಣೇಶ್ವರಿ ಪಿ. ದಂಪತಿಗಳ ಪುತ್ರ.


ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯಲ್ಲಿ ಆ.6 ರಂದು ನಡೆದ ವಿದ್ಯಾಭಾರತಿ ಕರ್ನಾಟಕ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ , ನರೇಂದ್ರ ಪ.ಪೂ.ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತಾ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ಪುಣಚದ ನಿವಾಸಿಗಳಾದ ಸುಬ್ಬ ನಾಯ್ಕ ಮತ್ತು ಕವಿತಾ ಎಸ್. ದಂಪತಿಗಳ ಪುತಿ. ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ಶ್ರಾವ್ಯ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ಪುಣಚದ ನಿವಾಸಿಗಳಾದ ಐತಪ್ಪ ನಾಯ್ಕ ಮತ್ತು ಸರಸ್ವತಿ ದಂಪತಿಗಳ ಪುತ್ರಿ. ಮತ್ತು ಕಬಕ ನಿವಾಸಿಗಳಾದ ರವಿ ಕೆ. ಮತ್ತು ಕೇಶಾವತಿ ದಂಪತಿಗಳ ಪುತ್ರ ಪ್ರಥಮ ವಿಜ್ಞಾನ ವಿಭಾಗದ ಸಾರ್ಥಕ್ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು,ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ

LEAVE A REPLY

Please enter your comment!
Please enter your name here