ಕುಂಬ್ರ:ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ

0

ಪುತ್ತೂರು:ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಕಾರೊಂದು ಡಿಕ್ಕಿಯಾದ ಘಟನೆ ಆ.5ರಂದು ಕುಂಬ್ರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಒಳಮೊಗ್ರು ಗ್ರಾಮದ ಖತೀಜಮ್ಮ(69ವ)ರವರು ಗಾಯಗೊಂಡವರು.

ಅವರು ಕುಂಬ್ರದಲ್ಲಿರುವ ಅಣ್ಣನ ಮನೆಗೆ ಹೋಗಿ ಹಿಂತಿರುಗಿ ಮನೆಗೆ ಬರುವ ಸಲುವಾಗಿ ಕುಂಬ್ರದಲ್ಲಿರುವ ಸರ್ವಿಸ್ ಸ್ಟೇಷನ್ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಸುಳ್ಯ ಕಡೆಯಿಂದ ಬರುತ್ತಿದ್ದ ಕಾರು ಅವರಿಗೆ ಡಿಕ್ಕಿಯಾಗಿದೆ.ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಖತೀಜಮ್ಮ ಅವರಿಗೆ ಗಾಯವಾಗಿದ್ದು, ಗಾಯಾಳುವನ್ನು ಅವರ ಮಗ ಸಂಶುದ್ದೀನ್ ಮತ್ತು ಕಾರಿನ ಚಾಲಕ ಉಪಚರಿಸಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಘಟನೆ ಕುರಿತು ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here