ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವನಮಹೋತ್ಸವ

0

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ, ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನಮಹೋತ್ಸವವನ್ನು ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್ ಮಾತನಾಡಿ, ವನಮಹೋತ್ಸವದ ಅಗತ್ಯತೆ, ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದುಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು.

ಸ್ಕೌಟ್ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್, ಗೈಡ್ ಶಿಕ್ಷಕಿಯರಾದ ವಿಲ್ಮಾ ಫೆರ್ನಾಂಡಿಸ್ ಮತ್ತು ನಳಿನಾಕ್ಷಿ, ಸ್ಕೌಟ್ ಶಿಕ್ಷಕಿ ಭವ್ಯ, ಬುಲ್ ಬುಲ್ ಶಿಕ್ಷಕಿ ಜೋಸ್ಲಿನ್ ಪಾಯಸ್ ಮತ್ತು ಮಮತಾ, ಕಬ್ ಶಿಕ್ಷಕಿ ದಿವ್ಯ ಉಪಸ್ಥಿತರಿದ್ದರು. ಗೈಡ್ಸ್ ವಿದ್ಯಾರ್ಥಿನಿಯರಾದ ಹರ್ಷಿಕ ಮತ್ತು ವೀಕ್ಷಾ ವನ ಮಹೋತ್ಸವದ ಬಗ್ಗೆ ಭಾಷಣ ಮಾಡಿದರು. ಗೈಡ್ಸ್ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ತನ್ವಿ ಪಿ ಸ್ವಾಗತಿಸಿ, ಆಕಾಶ್ ವಂದಿಸಿ, ಆರಾಧನಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here