ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಸಂಘಗಳ ಉದ್ಘಾಟನೆ ಹಾಗೂ ಶಾಲಾ ಡೈರಿ ಬಿಡುಗಡೆ

0

ಈಶ್ವರಮಂಗಲ:ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ‘ ಶಾಲಾ ವಿವಿಧ ಸಂಘಗಳ ಉದ್ಘಾಟನೆ ಹಾಗೂ ಶಾಲಾ ಡೈರಿ ಬಿಡುಗಡೆ’ ಕಾರ್ಯಕ್ರಮ ಆ.6ರಂದು ನಡೆಯಿತು.

ನೆಟ್ಟಣಿಗೆ ಮುಡ್ನೂರು ಗ್ರಾಮಪಂಚಾಯತ್ ಉಪಾಧ್ಯಕ್ಷ ರಾಮ ಮೇನಾಲ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಾಲಾ ಸಂಘಗಳ ಮಹತ್ವವನ್ನು ತಿಳಿಸಿ , ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು. ವಿದ್ಯಾರ್ಥಿಗಳು ಶಾಲಾ ಸಂಘಗಳ ವಿವರವನ್ನು ವಾಚಿಸಿದರು.

ಶಾಲಾ ಸಂಚಾಲಕ ಸರ್ವೋತ್ತಮ ಬೋರ್ಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಮುಖ್ಯ ಗುರು ವನಿತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಗಣಿತ ಶಿಕ್ಷಕಿ ವಿನುತಾ ಕಾರ್ಯಕ್ರಮ ನಿರೂಪಿಸಿದರು.ಇಂಗ್ಲಿಷ್ ಶಿಕ್ಷಕಿ ಪ್ರತಿಮಾ ಸ್ವಾಗತಿಸಿ , ವಿಜ್ಞಾನ ಶಿಕ್ಷಕಿ ವಂದನಾ ವಂದಿಸಿದರು.

LEAVE A REPLY

Please enter your comment!
Please enter your name here