ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನ ದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಗ್ರಾಮೋತ್ಸವ 2024 ಗುರುವಂದನ – ಸೇವಾ ಸಂಭ್ರಮ ಕಾರ್ಯಕ್ರಮವು ಆ.8ರಂದು ಸಂಸ್ಥಾನದ ರಾಜಾಂಗಣದಲ್ಲಿ ನಡೆಯಲಿದೆ.
ಬೆಳಗ್ಗೆ 8ಗಂಟೆಯಿಂದ ಶ್ರೀ ಗಣಪತಿ ಹವನ ನಡೆಯಲಿದೆ. ಬೆಳಗ್ಗೆ ಗಂಟೆ 9ರಿಂದ ರವಿರಾಜ್ ಶೆಟ್ಟಿ ಮತ್ತು ಬಳಗದವರಿಂದ ನಾಮಸಂಕೀರ್ತನೆ ನಡೆಯಲಿದೆ. ಬಳಿಕ ಶ್ರೀಗಳ ಪಾದಪೂಜೆ – ತುಲಾಭಾರ,ಉಯ್ಯಾಲೆ ಸೇವೆ, ಗುರುವಂದನೆ ನಡೆಯಲಿದೆ.ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿರವರು ದಿವ್ಯ ಉಪಸ್ಥಿತರಿದ್ದು, ಅನುಗ್ರಹ ಸಂದೇಶ ನೀಡಲಿದ್ದಾರೆ. ಸಾದ್ವಿ ಶ್ರೀ ಮಾತಾನಂದಮಯಿರವರು ದಿವ್ಯ ಸಾನಿಧ್ಯ ಕರುಣಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಎನ್.ಐ.ಎ.ನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ಕಡಂದಲೆಪರಾರಿ ಪ್ರಕಾಶ್ ಎಲ್. ಶೆಟ್ಟಿ, , ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ ಐಕಳ, ಯು.ಎ.ಇ. ಒಮನ್ ನ ಆಕ್ಕೆ ಬಿಲ್ಡಿಂಗ್ ಮೆಟೀರಿಯಲ್ಸ್ ಟ್ರೇಡಿಂಗ್ ಕಂಪನಿಯ ಆಡಳಿತ ನಿರ್ದೇಶಕ ಹರೀಶ್ ಶೇರಿಗಾರ್, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ. ಶೆಟ್ಟಿ,ಮುಂಬೈನ ಹೇರಂಬ ಕೆಮಿಕಲ್ ಇಂಡಸ್ಟ್ರೀಸ್ ಲಿ..ನ ಆಡಳಿತ ನಿರ್ದೇಶಕ ಸದಾಶಿವ ಕೆ. ಶೆಟ್ಟಿ ಕೂಳೂರು ಕನ್ಯಾನ, ಬೆಂಗಳೂರಿನ ಎಂ.ಆರ್.ಜಿ. ಗ್ರೂಪ್ ನ ಸಿ.ಎಂ.ಡಿ. ಡಾ. ಕೆ. ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ನಿವೃತ್ತ ಜಮಾ ಉಗ್ರಾಣ ಮುತ್ಸದ್ದಿ ಭುಜಬಲಿ ಧರ್ಮಸ್ಥಳ, ದುಬಾಯಿಯ ಫೋರ್ಚೂನ್ ಗ್ರೂಪ್ ಹೋಟೆಲ್ಸ್ ನ ಆಡಳಿತ ನಿರ್ದೇಶಕ ಪ್ರವೀಣ್ ಶೆಟ್ಟಿ ವಕ್ವಾಡಿ, ಹೈಟೆಕ್ ಇಲೆಕ್ಟಿಫಿಕೇಶನ್ ಇಂಜಿನಿಯರಿಂಗ್ (ಪ್ರೈ)ಲಿ.. ಮುಂಬೈ ಇದರ ಆಡಳಿತ ನಿರ್ದೇಶಕ ರವಿನಾಥ್ ವಿ. ಶೆಟ್ಟಿ, ಅಂಕ್ಷೇಶ್ವರ ಮೊದಲಾದವರು ಉಪಸ್ಥಿತರಿರಲಿದ್ದಾರೆ.
ಮಧ್ಯಾಹ್ನ ಘಂ.1.ರಿಂದ ಮಹಾಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಪರಾಹ್ಣ ಗಂಟೆ 3 ರಿಂದ ಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ಒಡಿಯೂರ ಶ್ರೀ ದತ್ತಾಂಜನೇಯ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ರಾತ್ರಿ ಘಂಟೆ 7 ರಿಂದ ಶ್ರೀ ಸನ್ನಿಧಿಯಲ್ಲಿ ವಿಶೇಷ ರಂಗಪೂಜೆ, ಬೆಳ್ಳಿ ರಥೋತ್ಸವ, ಮಹಾಪೂಜೆ ನಡೆಯಲಿದೆ ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ.