ಶಟಲ್ ಬ್ಯಾಡ್ಮಿಂಟನ್ : ಕೆಮ್ಮಾರ ಸರಕಾರಿ ಶಾಲಾ ತಂಡ ತಾಲೂಕು ಮಟ್ಟಕ್ಕೆ

0

ಉಪ್ಪಿನಂಗಡಿ: ಇಲ್ಲಿನ ಪುಳಿತ್ತಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ- ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ವಿದ್ಯಾರ್ಥಿಗಳಾದ ಜಮೀಲತ್ ನೌಶೀನ, ಜೈನಬ ವಫಿಯ್ಯ, ಜೈನಬ ವಸೀಯ್ಯ ತಂಡದಲ್ಲಿದ್ದು, ಉತ್ತಮ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್ ಪಟ್ಟ ತಮ್ಮದಾಗಿಸಿಕೊಂಡರು. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here