





ನೆಲ್ಯಾಡಿ: ಸೆ.7ರಂದು ನೆಲ್ಯಾಡಿ-ಕೌಕ್ರಾಡಿ ಶ್ರೀ ಶಬರೀಶ ಕಲಾಮಂದಿರದಲ್ಲಿ ನಡೆಯಲಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.7ರಂದು ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.
ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ರವಿಚಂದ್ರ ಅತ್ರಿಜಾಲ್, ಕಾರ್ಯದರ್ಶಿ ರಕ್ಷಿತ್, ಕೋಶಾಧಿಕಾರಿ ರವಿಚಂದ್ರ ಹೊಸವಕ್ಲು, ಉಪಾಧ್ಯಕ್ಷ ರಮೇಶ್ ಶೆಟ್ಟಿ ಬೀದಿ, ಜೊತೆ ಕಾರ್ಯದರ್ಶಿ ರಮೇಶ್ ಬಾಣಜಾಲ್, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಡಾ. ಸದಾನಂದ ಕುಂದರ್, ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಕೆ.ಎಸ್., ಕೋಶಾಧಿಕಾರಿ ವಿನೋದ್ ಬಿ.ಜೆ., ಆಡಳಿತ ಮಂಡಳಿ ಸದಸ್ಯರು, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.









