





ನೆಲ್ಯಾಡಿ: ಆಲಂಕಾರು ಶ್ರೀ ಭಾರತಿ ವಿದ್ಯಾಲಯದಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿದ್ದ ಇಚ್ಲಂಪಾಡಿ ನೇರ್ಲ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲಾ ಮೂವರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಪ್ರಾಥಮಿಕ ಶಾಲಾ ವಿಭಾಗದಲ್ಲಿ ಇಚ್ಲಂಪಾಡಿ ನೇರ್ಲ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಾದ ಪ್ರೀತಂ, ಯೋಗಿತಾ ಬಿ. ಹಾಗೂ ೬ನೇ ಸಾನ್ವಿತ್ ಎಸ್.ಎಂ.,ರವರು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.










