ಉಪ್ಪಿನಂಗಡಿ ಮಠ ಪುಳಿತ್ತಡಿ ಶಾಲೆಯಲ್ಲಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

0

ಪುತ್ತೂರು: ಉಪ್ಪಿನಂಗಡಿ ಮಠ ಪುಳಿತ್ತಡಿ ಸ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ನಡೆಯಿತು. ಉಪ್ಪಿನಂಗಡಿ ಗ್ರಾ.ಪಂ.ಅಧ್ಯಕ್ಷೆ ಲಲಿತಾ ಕಜೆಕ್ಕಾ ಉದ್ಘಾಟಿಸಿ ಶುಭಹಾರೈಸಿದರು.

ಶಾಲಾ ಎಸ್ ಡಿ ಎಂ ಸಿ ಝಕರಿಯಾ, ಮುಖ್ಯಗುರು ಜುಲಿಯಾನ್ ವಾಸ್, ಉಪ್ಪಿನಂಗಡಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಅಶ್ರಫ್, ವಲಯ ನೋಡಲ್ ಅಧಿಕಾರಿಗಳು, ದೈಹಿಕ ಶಿಕ್ಷಣ ಶಿಕ್ಷಕರಾದ ಗಂಗಾಧರ್, ಕುಶಾಲಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ವಿಮಲ ನೆಲ್ಯಾಡಿ , ನಿವೃತ್ತ ಅಧ್ಯಾಪಕ ಜನಾರ್ದನ, ಶಾಲಾ ಸಹ ಶಿಕ್ಷಕಿ ಶುಭಲತಾ ಉಪಸ್ಥಿತರಿದ್ದರು.

ಅತಿಥಿ ಶಿಕ್ಷಕಿ ರಮಣಿ, ಗೌರವ ಶಿಕ್ಷಕಿ ಶ್ವೇತಾ, ಜ್ಞಾನದೀಪ ಶಿಕ್ಷಕಿ ಮೋಹಿನಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.


ವಿಜೇತರ ವಿವರ:
ಬಾಲಕಿಯರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಪ್ರಥಮ ಸ್ಥಾನ ಪಡೆದುಕೊಂಡರೆ, ಸೈಂಟ್ ಮೇರಿಸ್ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಾಲಕರ ವಿಭಾಗದಲ್ಲಿ ಸೈಂಟ್ ಮೇರಿಸ್ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡರೆ, ಉಪ್ಪಿನಂಗಡಿ ಮಠ ಪುಳಿತ್ತಡಿ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿತು.

LEAVE A REPLY

Please enter your comment!
Please enter your name here