ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ತೋಮಸ್ ಇಡಯಾಲ್ ನೇಮಕ

0

ಕಡಬ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ನೂಜಿಬಾಳ್ತಿಲ ಗ್ರಾಮದ ತೋಮಸ್ ಇಡಯಾಲ್ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಸಮಿತಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಆ.7ರಂದು ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಭೆಯಲ್ಲಿ ತೋಮಸ್ ಅವರನ್ನು ನೇಮಕಾತಿ ಮಾಡಿ ಆದೇಶ ಪತ್ರ ನೀಡಿದ್ದಾರೆ.
ತೋಮಸ್ ಇಡಯಾಲ್ ಅವರು ನೂಜಿಬಾಳ್ತಿಲ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿ, ಕಡಬ ಬ್ಲಾಕ್ ಕಾಂಗ್ರೆಸ್ ನ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದು, ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ನ ಕಡಬ ತಾಲೂಕು ಘಟಕದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here