ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

0

ವಿದ್ಯಾರ್ಥಿಗಳ ಭವಿಷ್ಯಕ್ಕೆ ದ್ವಿತೀಯ ಪಿಯು ದಿಕ್ಸೂಚಿ: ಶಿವರಾಮ ಆಳ್ವ

ಪುತ್ತೂರು: ಪದವಿ ಪೂರ್ವ ದ್ವಿತೀಯ ವರ್ಷ ಎನ್ನುವುದು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ದಿಕ್ಸೂಚಿಯಾಗಿದೆ. ಪಿಯುದಲ್ಲಿ ನಡೆಸಲ್ಪಡುವ ಸಿ.ಇ.ಟಿ.ಯಲ್ಲಿ ಉತ್ತಮ ಅಂಕ ಪಡೆದಲ್ಲಿ ವಿದ್ಯಾರ್ಥಿಗಳ ಮುಂದಿನ ಜೀವನ ಸುಗಮವಾಗುವುದು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ಶಿವರಾಮ ಆಳ್ವ ಹೇಳಿದರು.


ಅವರು ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವವಿದ್ಯಾಲಯದ ಶಿಕ್ಷಕ -ರಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪೋ?ಕರು ಸದಾ ಮಕ್ಕಳ ಶೈಕ್ಷಣಿಕ ವಿಚಾರಗಳನ್ನು ಅರಿತುಕೊಂಡು ಸೂಕ್ತ ಮಾರ್ಗದರ್ಶನ, ಸಲಹೆ ಹಾಗೂ ಸೂಚನೆ ನೀಡುವುದು ಅಗತ್ಯ. ಅದೇ ರೀತಿ ಸಂಬಂಧಿತ ಶಿಕ್ಷಕರ ಜೊತೆಗೆ ಸಮಾಲೋಚನೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಅವಲೋಕನವನ್ನೂ ನಡೆಸಬೇಕು. ಆದ್ದರಿಂದ ಆಗಾಗ ವಿದ್ಯಾಲಕ್ಕೆ ಭೇಟಿ ನೀಡುವ ಪರಿಪಾಠ ರೂಢಿಸಿಕೊಳ್ಳಬೇಕು ಎಂದರು.


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ಅಂಬಿಕಾ ಸಂಸ್ಥೆಯ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆಯುತ್ತಿರುವುದು ಉತ್ತಮ ಸಾಧನೆ ಮೆರೆಯುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹ ಕೊಡುವುದು ಶಿಕ್ಷಣ ಸಂಸ್ಥೆಗಳ, ಆಡಳಿತ ಮಂಡಳಿಯ ಹೊಣೆಗಾರಿಕೆ. ಮಕ್ಕಳಿಗೆ ಸ್ವಾತಂತ್ರ್ಯ ನೀಡಬೇಕು ಆದರೆ ಅದರ ದುರುಪಯೋಗವಾಗದಂತೆ ಪೋ?ಕರು ಜವಾಬ್ದಾರಿ ವಹಿಸಿಕೊಳ್ಳುವುದು ಅಗತ್ಯ ಎಂದರು.


ಪ್ರಾಪಂಚಿಕ ಜ್ಞಾನಕ್ಕೆ ಆದ್ಯತೆ:
ತರಗತಿಗಳಲ್ಲಿ ಸ್ಮಾರ್ಟ್ ಬೋರ್ಡ್ ಅಳವಡಿಸಿ ಪ್ರಯೋಗಾತ್ಮಕ ತರಗತಿಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಪ್ರಾಪಂಚಿಕ ಜ್ಞಾನ ವೃದ್ಧಿಗೆ ವೈವಿಧ್ಯಮಯ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಅವರ ಚಟುವಟಿಕೆಯ ಕುರಿತು ಮಾಹಿತಿ ಪಡೆಯಲು ಪೋಷಕರು ಆಗಾಗ ವಿದ್ಯಾಲಯಕ್ಕೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಅರಿಯುವುದು ಅಗತ್ಯ. ಹಿರಿಯರಿಗೆ ದೇಶದ ಮೇಲೆ ಹೆಚ್ಚು ಋಣವಿದ್ದು ಮಕ್ಕಳನ್ನು ಉತ್ತಮ ನಾಗರೀಕರನ್ನಾಗಿ ಮಾಡುವ ಜವಾಬ್ದಾರಿಯಿದೆ. ಮಕ್ಕಳನ್ನು ಬ್ರಾಹ್ಮಿ ಮುಹೂರ್ತದಲ್ಲಿ ಏಳುವಂತೆ ಮಾಡಿ, ಅವರನ್ನು ಓದಲು ಪ್ರೋತ್ಸಾಹಿಸಿದಲ್ಲಿ ಹೆಚ್ಚು ಹೆಚ್ಚು ಸಾಧನೆ ಮಾಡಲು ಸಾಧ್ಯ ಎಂದರು.


ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ನಟ್ಟೋಜ ಫೌಂಡೇಶನ್ ಟ್ರಸ್ಟ್ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಉಪ ಪ್ರಾಂಶುಪಾಲೆ ಶೈನಿ ಕೆ.ಜೆ., ಉಪನ್ಯಾಸಕರು, ಪೋಷಕರು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಪೂರ್ಣ ನಿರೂಪಿಸಿದರು. ಪ್ರಯೋಗಾಲಯ ಸಹಾಯಕರಾದ ಮುರಳಿ ಮೋಹನ್ ಮತ್ತು ನಯನ್ ಸಹಕರಿಸಿದರು.

LEAVE A REPLY

Please enter your comment!
Please enter your name here