ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ. 10 ರಂದು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ‍್ಯಕ್ರಮದಲ್ಲಿ ಸನ್ಮಾನಗೊಳ್ಳಲಿರುವ ವಿವಿಧ ಕ್ಷೇತ್ರಗಳ ಸಾಧಕರ ನಿವಾಸಕ್ಕೆ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಪದಾಧಿಕಾರಿಗಳು ಭೇಟಿ ನೀಡಿ, ಸಮಾರಂಭದ ಆಮಂತ್ರಣ ನೀಡಿ, ಕಾರ‍್ಯಕ್ರಮಕ್ಕೆ ಆಹ್ವಾನಿಸಿದರು.
ಆಬುಧಾಬಿಯಲ್ಲಿ ಉದ್ಯಮಿಯಾಗಿರುವ, ಅಬುಧಾಬಿ ಇಂಡಿಯಾ ಸೋಶಿಯಲ್ ಮತ್ತು ಕಲ್ಚರಲ್ ಸೊಸೈಟಿಯ ಅಧ್ಯಕ್ಷ ಮಿತ್ರಂಪಾಡಿ ಜಯರಾಮ ರೈ, ಸಿರಿಕಡಮಜಲು ಕೃಷಿ ಪ್ರಶಸ್ತಿ ಪ್ರಾಯೋಜಕರಾದ ಕಡಮಜಲು ಸುಭಾಸ್ ರೈ, ಪ್ರತಿಭಾನ್ವಿತ ವಿದ್ಯಾ ಚನಿಲ ಪ್ರಶಸ್ತಿ ಪ್ರಾಯೋಜಕರಾದ ಚನಿಲ ತಿಮ್ಮಪ್ಪ ಶೆಟ್ಟಿ, ಪಂಚಮಿ ಉದ್ಯಮ ಸಿರಿ ಪ್ರಶಸ್ತಿ ಪ್ರಾಯೋಜಕರಾದ ಪುರಂದರ ರೈ ಮಿತ್ರಂಪಾಡಿ, ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ದಯಾನಂದ ರೈ ಮನವಳಿಕೆಗುತ್ತು, ಹಿರಿಯರಾದ ರಾಮಯ್ಯ ರೈ ತಿಂಗಳಾಡಿ, ಹಿರಿಯ ನ್ಯಾಯವಾದಿ ಬಾಲಕೃಷ್ಣ ರೈ ಅರಂತನಡ್ಕ, ನ್ಯಾಯವಾದಿ ಅರುಣಾ ದಿನಕರ್ ರೈ, ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು, ತಾಲೂಕು ವಿದ್ಯಾರ್ಥಿ ಬಂಟರ ಸಂಘದ ಅಧ್ಯಕ್ಷ ಪವನ್ ಶೆಟ್ಟಿ ಕಂಬಳತಡ್ಡರವರ ನಿವಾಸಕ್ಕೆ ಭೇಟಿ ನೀಡಿ ಆಹ್ವಾನಿಸಲಾಯಿತು.
ಬಂಟರ ಸಂಘದ ಪ್ರಧಾನ ಕಾರ‍್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ, ಮಾತೃ ಸಂಘದ ಪುತ್ತೂರು ತಾಲೂಕು ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಬಂಟರ ಸಂಘದ ನಿರ್ದೇಶಕರುಗಳಾದ ರವಿಪ್ರಸಾದ್ ಶೆಟ್ಟಿ ಬನ್ನೂರು, , ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಕಿರಣ್ ರೈ ಬಲ್ನಾಡು, ಮಹಿಳಾ ಬಂಟರ ಸಂಘದ ಅನಿತಾ ಹೇಮನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.