ಉಪ್ಪಿನಂಗಡಿ ಗ್ರಾ.ಪಂ.ನಲ್ಲಿ ಟೈಲರಿಂಗ್ ತರಬೇತಿ ಕಾರ್ಯಾಗಾರದ ಸಮಾರೋಪ

0

ಉಪ್ಪಿನಂಗಡಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಉಪ್ಪಿನಂಗಡಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಗ್ರಾಮ ಪಂಚಾಯತ್ ಉಪ್ಪಿನಂಗಡಿ ಹಾಗೂ ದಿವ್ಯ ಜ್ಯೋತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಉಪ್ಪಿನಂಗಡಿ ಇದರ ಜಂಟಿ ಆಶ್ರಯದಲ್ಲಿ ಉಪ್ಪಿನಂಗಡಿ ಗ್ರಾ.ಪಂ.ನಲ್ಲಿ ನಡೆದ ಎರಡು ತಿಂಗಳ ಹೊಲಿಗೆ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಆ.7ರಂದು ನಡೆಯಿತು.


ಅತಿಥಿಯಾಗಿದ್ದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ್ ಶೆಟ್ಟಿ ಅವರು ಮಾತನಾಡಿ, ಸ್ವಉದ್ಯೋಗದ ಮೂಲಕ ಮಹಿಳೆಯರು ಅಭಿವೃದ್ಧಿಯನ್ನು ಹೊಂದಬೇಕು ಎಂದರು. ಭಾರತೀಯ ವಿಕಾಸ ಟ್ರಸ್ಟ್‌ನ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯರವರು ಸ್ವ-ಉದ್ಯೋಗದ ನಿಯಮಗಳು, ಸ್ವ-ಉದ್ಯೋಗಕ್ಕೆ ಸಿಗುವ ಬ್ಯಾಂಕ್ ಸೌಲಭ್ಯಗಳು ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಬ್ಯಾಂಕ್ ಬರೋಡ ಇದರ ಉಪ್ಪಿನಂಗಡಿ ಶಾಖಾ ವ್ಯವಸ್ಥಾಪಕ ವೆಂಕಟರಮಣ ಅವರು ಬ್ಯಾಂಕಿನಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿದರು.


ಉಪ್ಪಿನಂಗಡಿ ಗ್ರಾ.ಪಂ.ಅಧ್ಯಕ್ಷೆ ಲಲಿತಾ, ಉಪಾಧ್ಯಕ್ಷೆ ವಿದ್ಯಾಲಕ್ಷ್ಮಿ ಪ್ರಭು, ಕಾರ್ಯದರ್ಶಿ ಗೀತಾಶೇಖರ್, ತಾಲೂಕು ಅಭಿಯಾನ ನಿರ್ವಹಣೆ ಘಟಕದ ಕೃಷಿಯೇತರ ಘಟಕದ ವ್ಯವಸ್ಥಾಪಕಿ ನಳಿನಿ, ದಿವ್ಯ ಜ್ಯೋತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷೆ ನೀಲಾವತಿ ಉಪಸ್ಥಿತರಿದ್ದರು. ಪಶುಸಖಿ ಜಯಲಕ್ಷ್ಮಿ ನಿರೂಪಿಸಿದರು. ಸಂಜೀವಿನಿ ಮುಖ್ಯ ಪುಸ್ತಕ ಬರಹಗಾರರಾದ ಚೈತ್ರ ಸ್ವಾಗತಿಸಿದರು. ಸ್ಥಳೀಯ ಸಂಪನ್ಮೂಲ ವ್ಯಕ್ತಿ ಪ್ರೇಮಲತಾ ವಂದಿಸಿದರು. ಕಾರ್ಯಕ್ರಮದಲ್ಲಿ ಸಂಜೀವಿನಿ ಸದಸ್ಯರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಬಿರಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here