ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ.8ರಂದು ಕಂಪ್ಯೂಟರ್ ತರಗತಿ ಉದ್ಘಾಟನೆಗೊಂಡಿತು.
ಪುತ್ತೂರು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಅಧ್ಯಕ್ಷ ಸತ್ಯಗಣೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಕಂಪ್ಯೂಟರ್ ಶಿಕ್ಷಣದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಹಾಗೂ ದಾನಿ ಧರ್ಮಪಾಲ ಅವರು ಪಾಲ್ಗೊಂಡಿದ್ದರು. ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಿದರು. ಸಂಸ್ಥೆಯ ಸಂಚಾಲಕ ಎ.ವಿ ನಾರಾಯಣ, ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಮಳುವೇಲು, ಹಾಗೂ ನಿರ್ದೇಶಕಿ ಪ್ರತಿಭಾದೇವಿರವರು ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪುತ್ತೂರು ತುಳು ಕೂಟದ ಅಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯಾನ್ ಮಸ್ಕರೇನಸ್, ಬೋಧಕ ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿಯರಾದ ಆನ್ವಿ, ಶಿವಾನಿ, ಅದ್ವಿತಿ, ಜ್ಯೋಸ್ತ್ನ, ಚಾರ್ವಿ ಪ್ರಾರ್ಥಿಸಿದರು. ಸಂಸ್ಥೆಯ ಪ್ರಾಂಶುಪಾಲೆ ಸವಿತಾ ಕುಮಾರಿ ಕೆ ಯವರು ಸ್ವಾಗತಿಸಿದರು, ಶಿಕ್ಷಕಿಯರಾದ ರಂಜಿತಾ ರೈ ವಂದಿಸಿದರು. ವನಿತಾ ಕಾರ್ಯಕ್ರಮವನ್ನು ನಿರೂಪಿಸಿದರು