ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಇಚ್ಲಂಪಾಡಿ ನೇರ್ಲ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಶ್ರಮದಾನ ಮಾಡಲಾಯಿತು.
ಶಾಲೆಯ ಸುತ್ತ ಮುತ್ತ ಸ್ವಚ್ಛತೆ ಹಾಗೂ ಶಾಲೆಯ ಮೇಲ್ಛಾವಣಿ ಮೇಲೆ ಬಗ್ಗಿದ ಮರದ ಕೊಂಬೆಗಳನ್ನು ತೆರವುಗೊಳಿಸಲಾಯಿತು. ಶ್ರಮದಾನದಲ್ಲಿ 16 ಸ್ವಯಂ ಸೇವಕರು ಭಾಗವಹಿಸಿದ್ದರು. ಶ್ರಮದಾನದ ನಂತರ ಘಟಕದ ಮಾಸಿಕ ಸಭೆಯು ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದರವರು ಮಾಹಿತಿ ನೀಡಿದರು. ರಮೇಶ್ ಬಾಣಜಾಲುರವರು ಘಟಕಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಘಟಕದ ಮಾಹಿತಿ ನೀಡಿದರು. ಸಭೆಯಲ್ಲಿ ನೇರ್ಲ ಶಾಲಾ ಮುಖ್ಯಗುರು ಜಯಶ್ರೀ, ಎಸ್ಡಿಎಂಸಿ ಉಪಾಧ್ಯಕ್ಷೆ ನಂದಕುಮಾರಿ, ಸದಸ್ಯರು, ಘಟಕದ ಸ್ವಯಂಸೇವಕರು ಉಪಸ್ಥಿತರಿದ್ದರು. ಘಟಕ ಸಂಯೋಜಕಿ ನಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ,ಸ್ವಾಗತಿಸಿದರು. ಇಚ್ಲಂಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ವೇದಾ ಪಿ.ವಂದಿಸಿದರು.