ಕರಾಟೆ ಸ್ಪರ್ಧೆಯಲ್ಲಿ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿನಿ ಮೌಶ್ಮಿ ಆರ್. ಶೆಟ್ಟಿ ಪ್ರಥಮ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಬಾಳ್ತಿಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಕರಾಟೆ ಪಂದ್ಯಾಟದ 1ರಿಂದ 17ರ ವಯೋಮಾನದ ಬಾಲಕಿಯರ 34 ಕೆ.ಜಿ‌. ವಿಭಾಗದ ಸ್ಪರ್ಧೆಯಲ್ಲಿ ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಮೌಶ್ಮಿ ಆರ್. ಶೆಟ್ಟಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರಿಂದ ಕರಾಟೆ ತರಬೇತಿ ಪಡೆಯುತ್ತಿರುವ ಮೌಶ್ಮಿ ಶೆಟ್ಟಿಯವರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷರಾದ ವಿಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ಹಾಗೂ ಸ್ನೇಹ ಶೆಟ್ಟಿ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here