ಆ.14: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ 2024

0

10 ವಿದ್ಯಾರ್ಥಿ-ವಿದ್ಯಾರ್ಥಿನಿರಿಗೆ ಶೀಂಟೂರು ಶಿಷ್ಯ ವೇತನ – ಸವಣೂರು ಕೆ ಸೀತಾರಾಮ ರೈ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸ್ಥಾಪಕ ಶೀಂಟೂರು ನಾರಾಯಣ ರೈಯವರ 13ನೇ ವರ್ಷದ ಸ್ಥಾಪಕರ ದಿನಾಚರಣೆ ಸವಣೂರು ವಿದ್ಯಾಗಂಗೋತ್ರಿಯ ವಿದ್ಯಾಚೇತನ ಸಭಾಂಗಣದಲ್ಲಿ ಆ. 14 ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈಯವರು ತಿಳಿಸಿದರು.


ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸಂಸದ ಮಾಜಿ ಸೈನಿಕ ಕ್ಯಾ| ಬ್ರಿಜೇಶ್ ಚೌಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪ್ರತಿ ವರ್ಷದಂತೆ ನೀಡುವ ಶೀಂಟೂರು ಸನ್ಮಾನವನ್ನು ಈ ಭಾರಿ ಶಿಕ್ಷಕ್ಕೆ ಕ್ಷೇತ್ರಕ್ಕೆ ಮೀಸಲಿಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾದ್ಯಾಯನಿ ರೂಪಕಲಾ ಕೆ ಅವರಿಗೆ ನೀಡಿ ಗೌರವಿಸಲಾಗುವುದು. ಇದೇ ಸಂದರ್ಭ ಸೇನೆಗೆ ನೀಡುವ ಗೌರವಾರ್ಥ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ನೀಡಿ ಗೌರವಿಸಲಾಗುವುದು. ಬಳ್ಳಾರಿ ಕುಮಾರಸ್ವಾಮಿ ಮಿನರಲ್ ಎಕ್ಸ್‌ಪೋರ್ಟ್ಸ್‌ನ ಮಾಲಕ ಮಲಾರ್‌ಬೀಡು ರವೀಂದ್ರನಾಥ ಆಳ್ವ, ಗುಜರಾತ್‌ನ ಗ್ರೀನ್ ಹೀರೋ ಆಫ್ ಇಂಡಿಯಾದ ಫಾರೆಸ್ಟ್ ಕ್ರಿಯೇಟರ್‌ನ ಸಹ ಸ್ಥಾಪಕ ಡಾ. ಆರ್ ಕೆ.ನಾಯರ್, ದ.ಕ. ಮತ್ತು ಉಡುಪಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ನಡುಮನೆ, ಸವಣೂರು ಎಸ್.ಎನ್.ಆರ್.ರೂರಲ್ ಎಜ್ಯುಕೇಶನ್ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಎನ್ ಸುಂದರ ರೈ ನಡುಮನೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರು ಶೀಂಟೂರು ಸಂಸ್ಮರಣೆ ಮಾಡಲಿದ್ದಾರೆ ಎಂದವರು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ ಕೆ, ವಿದ್ಯಾರಶ್ಮಿ ಸ್ವತಂತ್ರ ಪ.ಪೂ ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ ಉಪಸ್ಥಿತಿಯಲ್ಲಿದ್ದರು.


10 ವಿದ್ಯಾರ್ಥಿ-ವಿದ್ಯಾರ್ಥಿನಿರಿಗೆ ಶೀಂಟೂರು ಶಿಷ್ಯ ವೇತನ
ವಿದ್ಯಾರಶ್ಮಿ ವಿದ್ಯಾಲಯದ ದಶಮಾನೋತ್ಸವ ಆಚರಣೆಯು ಸಂದರ್ಭದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ವಿನಯ ಹೆಗ್ಡೆಯವರು ಪ್ರಸ್ತಾಪಿಸಿ ಮುಂದಿಟ್ಟ ಯೋಜನೆಯೇ ಶೀಂಟೂರು ನಾರಾಯಣ ರೈ ಶಿಕ್ಷಣ ಪ್ರತಿಷ್ಠಾನ ಸವಣೂರು ಆಗಿದ್ದು, ಆ ಸಂದರ್ಭ ಎ.ಜೆ ಆಸ್ಪತ್ರೆಯ ಡಾ.ಎ.ಜೆ.ಶೆಟ್ಟಿರವರು ಮೊತ್ತ ಮೊದಲಾಗಿ ತಮ್ಮ ಕೈಯಾರೆ 10 ಲಕ್ಷ ರೂಪಾಯಿಯನ್ನು ನೀಡಿದ್ದರು. ಅದಾದ ಬಳಿಕ ವಿನಯ ಹೆಗ್ಡೆ ರೂ. 2ಲಕ್ಷ ನೀಡಿದ್ದಾರೆ. ಇದರಿಂದ ಬರುವ ಬಡ್ಡಿ ಹಣವನ್ನು ಪ್ರತಿಭಾವಂತ ಮತ್ತು ಆರ್ಥಿಕ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶಿಷ್ಯ ವೇತವನ್ನು ನೀಡಬೇಕೆಂದು ನಿರ್ದೇಶಿಸಿದರು. ಇದರಿಂದ ಪ್ರೇರಿತರಾಗಿ ಮುಂದೆ ಹಲವು ಮಂದಿ ಸಹೃದಯಿ ದಾನಿಗಳು ಸ್ವಯಂ ಇಚ್ಚೆಯಿಂದ ಉತ್ತಮ ಮೊತ್ತವನ್ನು ನೀಡುತ್ತಾ ಬಂದಿದ್ದಾರೆ. ಅದರಂತೆ ಪ್ರತಿ ವರ್ಷ ಶೀಂಟೂರು ಸ್ಮೃತಿ ಕಾರ‍್ಯಕ್ರಮದಲ್ಲಿ ನಮ್ಮ ವಿದ್ಯಾಸಂಸ್ಥೆಯ ವಿವಿಧ ತರಗತಿಗಳ ಹತ್ತು ಮಂದಿ ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಗುರುತಿಸಿ, ತಲಾ 5 ಸಾವಿರದಂತೆ ಶಿಷ್ಯ ವೇತನವನ್ನು ನೀಡುತ್ತಿದ್ದೇವೆ ಎಂದು ಸವಣೂರು ಕೆ. ಸೀತಾರಾಮ ರೈ ತಿಳಿಸಿದರು.

2ನೇ ಮಹಾಯುದ್ಧದಲ್ಲಿ ಭಾರತೀಯ ಸೇನಾನಿಯಾಗಿ ಬರ್ಮಾದಲ್ಲಿ ಕರ್ತವ್ಯ ನಿರ್ವಹಿಸಿದ್ದ, ಶೀಂಟೂರು ನಾರಾಯಣ ರೈಯವರು ಸೇನಾ ನಿವೃತ್ತಿಯ ಬಳಿಕ ಶಿಕ್ಷಕರಾಗಿದ್ದರು ಮತ್ತು ಸಹಕಾರಿ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ಒತ್ತಾಸೆಯಂತೆ ಸವಣೂರಿನಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಆರಂಭಮಾಡಲಾಗಿದೆ. ಶೀಂಟೂರು ನಾರಾಯಣ ರೈಯವರ ಜೀವನಾದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಪ್ರತಿ ವರ್ಷ ಅವರ ನೆನಪಿನಲ್ಲಿ ಆಚರಿಸಿಕೊಂಡು ಬರುತ್ತಿರುವ ಶೀಂಟೂರು ಸ್ಮೃತಿ ಕಾರ್ಯಕ್ರಮದಲ್ಲಿ ಒಂದು ವರ್ಷ ಒಬ್ಬ ಶಿಕ್ಷಕ ಮತ್ತು ಇನ್ನೊಂದು ವರ್ಷದಲ್ಲಿ ಒಬ್ಬ ಸೇನಾನಿಯನ್ನು ಗುರುತಿಸಿ ಅವರನ್ನು ಸನ್ಮಾನಿಸುತ್ತಾ ಬಂದಿದ್ದೇವೆ. ಈ ಭಾರಿ ಶಿಕ್ಷಕರನ್ನು ಸನ್ಮಾನಿಸುತ್ತಿದ್ದೇವೆ. ಕಾಕತಾಳಿಯವಾಗಿ ಸಂಸದರು ಮಾಜಿ ಸೈನಿಕ ಆಗಿದ್ದರಿಂದ ಅವರನ್ನೂ ಸನ್ಮಾನಿಸಲಿದ್ದೇವೆ.
-ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ
ಸಂಚಾಲಕರು. ವಿದ್ಯಾರಶ್ಮಿ ಸಮೂಹ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು

LEAVE A REPLY

Please enter your comment!
Please enter your name here