ಈಶ್ವರಮಂಗಲ: ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆ, ಹನುಮಗಿರಿ ಈಶ್ವರಮಂಗಲ ಇಲ್ಲಿ “ಆಧುನಿಕ ಜೀವನದಲ್ಲಿ ವಿದ್ಯಾರ್ಥಿಗಳನ್ನು ಶಿಕ್ಷಣದಲ್ಲಿ ಹಾಗೂ ಇತರ ಕ್ಷೇತ್ರದಲ್ಲಿ ತೊಡಗಿಸುವಲ್ಲಿ ಹೆತ್ತವರ ಪಾತ್ರ” ಎಂಬ ವಿಷಯದ ಬಗ್ಗೆ ಕಾರ್ಯಕ್ರಮ ನಡೆಯಿತು.
ಶಾಲಾಡಳಿತ ಮಂಡಳಿಯ ಅಧ್ಯಕ್ಷ ನನ್ಯ ಅಚ್ಚುತ ಮೂಡತ್ತಾಯರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪೂರಕವಾದ ಎಲ್ಲಾ ಚಟುವಟಿಕೆಗಳಿಗೆ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ಪ್ರೋತ್ಸಾಹಿಸುತ್ತಾರೆ.ರಕ್ಷಕರು ಇದಕ್ಕೆ ಸಹಕಾರ ನೀಡಿದರೆ ಮಾತ್ರ ಯಶಸ್ಸು ಪರಿಪೂರ್ಣ ಸಾಧ್ಯ ಎಂದು ಹೇಳಿದರು.
ಶಾಲಾ ಪ್ರಾಂಶುಪಾಲ ಕೆ ಶಾಮಣ್ಣ ವಿದ್ಯಾರ್ಥಿಗಳಿಗೆ ರಕ್ಷಕರ ಮಾರ್ಗದರ್ಶನ ಅಗತ್ಯ. ರಕ್ಷಕರ ಸಂಪೂರ್ಣ ಸಹಕಾರ ಇದ್ದರೆ ಶಿಕ್ಷಣ ಹಾಗೂ ಮುಂದಿನ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಕೃಷ್ಣಮೂರ್ತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸೌಮ್ಯ ಎ ಸಂಚಾಲಕ ಶಿವರಾಮ್ ಪಿ ಹಾಗೂ ಆಡಳಿತ ಮಂಡಳಿಯ ಸದಸ್ಯ ನಹುಷ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿಯರಾದ ಅನುಶ್ರೀ ಹಾಗೂ ಅಕ್ಷತ ನಿರೂಪಿಸಿದರು .ಸೌಮ್ಯ ಎ ಸ್ವಾಗತಿಸಿ, ಜಯಸ್ವಿನಿ ವಂದಿಸಿದರು.ತದನಂತರ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಹಾಗು ಪರೀಕ್ಷಾ ಭಯ ನಿವಾರಣೆ ಕುರಿತು ತರಬೇತಿ ಕಾರ್ಯಗಾರವು ನಡೆಯಿತು.