ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿಯರು ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ವಿದ್ಯಾ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ಆವರಣದಲ್ಲಿ ಸರೋಶ್ ಈಜುಕೊಳದಲ್ಲಿ ಆ.8ರಂದು ನಡೆದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಿಂದ ಭಾಗವಹಿಸಿದ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿ ಸಾಧನೆ ಮಾಡಿದ್ದಾರೆ.

9ನೇ ತರಗತಿಯ ಸಿಯಾ ಭವಿನ್ ಸವಜಾನಿ (ಭವಿನ್ ಸವಜಾನಿ ಮತ್ತು ಸಹನಾ ಭವಿನ್ ಸವಜಾನಿ ದಂಪತಿ ಪುತ್ರಿ) ಇವರು, 200 ಮೀಟರ್ ಫ್ರೀ ಸ್ಟೈಲ್, 100 ಮೀಟರ್ ಫ್ರೀ ಸ್ಟೈಲ್ ಮತ್ತು 100 ಮೀಟರ್ ಬ್ಯಾಕ್ ಸ್ಟ್ರೋಕ್ ಈಜು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ. 8ನೇ ತರಗತಿಯ ಲಾಸ್ಯ ಕಿಶನ್ (ಕಿಶನ್ ಡಿ. ಪಿ ಮತ್ತು ಡೀನಾ ಕಿಶನ್ ದಂಪತಿ ಪುತ್ರಿ) ಇವರು, 50 ಮೀಟರ್ ಫ್ರೀ ಸ್ಟೈಲ್, 50 ಮೀಟರ್ ಬ್ಯಾಕ್ ಸ್ಟ್ರೋಕ್ ಮತ್ತು 50 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿರುವರು. ಇಬ್ಬರು ವಿದ್ಯಾರ್ಥಿನಿಯರೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here