ಅ.11: ಪಡುಮಲೆ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ- ಆಟಿ ಐಸಿರಿ, ವನಮಹೋತ್ಸವ, ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

0

ಬಡಗನ್ನೂರು: ಮರಾಟಿ ಸಮಾಜ ಸೇವಾ ಸಂಘ (ರಿ) ಕೊಂಬೆಟ್ಟು ಪುತ್ತೂರು ಇದರ ಗ್ರಾಮೀಣ ಶಾಖೆ ಮರಾಟಿ ಸಮಾಜ ಸೇವಾ ಸಂಘ ಪಡುಮಲೆ ಇದರ ವಾರ್ಷಿಕ ಮಹಾಸಭೆ, ಆಟಿ ಐಸಿರಿ, ವನಮಹೋತ್ಸವ, ಹಾಗೂ  ಸಾಧಕರಿಗೆ ಸನ್ಮಾನ  ಕಾರ್ಯಕ್ರಮವು ಅ.11ರಂದು ಬೆಳಗ್ಗೆ ಗಂ.9ಕ್ಕೆ ನಾರಾಯಣ ನಾಯ್ಕ ಪೇರಾಲು ಇವರ ಮನೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು  ಪುತ್ತೂರು ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘ ಅಧ್ಯಕ್ಷ ದುಗ್ಗಪ್ಪ ನಾಯ್ಕ  ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮವು ಪಡುಮಲೆ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ  ಅಪ್ಪಯ್ಯ ನಾಯ್ಕ ತಲೆಂಜಿ  ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಅತಿಥಿಗಳಾಗಿ  ಪ್ರಗತಿಪರ ಕೃಷಿಕ  ಕುಂಞಣ್ಣ ನಾಯ್ಕ ಬಾಳೆಗುಡ್ಡೆ , ಕಾಸರಗೋಡು ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ಬುದ್ದ ನಾಯ್ಕ ಮುಂಡೋಳೆ, ಪುತ್ತೂರು ಕೊಂಬೆಟ್ಟು ಮರಾಟಿ ಯುವ ವೇದಿಕೆ  ಅಧ್ಯಕ್ಷ ಗಂಗಾಧರ ನಾಯ್ಕ ಕೌಡಿಚ್ಚಾರು, ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪೂರ್ವಾಹ್ನ ಗಂ 9 ರಿಂದ 11 ವರೆಗೆ ಸಮಾಜದ ಮಹಿಳೆಯರಿಗೆ, ಪುರುಷರಿಗೆ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧೆಕೂಟ ನಡೆಯಲಿದೆ .

ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮತ್ತು

10ನೇ ಹಾಗೂ ದ್ವೀತಿಯ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿರುವುದು.

LEAVE A REPLY

Please enter your comment!
Please enter your name here